ಬೆಂಗಳೂರು: ಸೈಬರ್ ವಂಚನೆ ಮಾಡಿದ್ದ ವ್ಯಕ್ತಿಯನ್ನು ವಿಚಾರಣೆಗೆಂದು ಬೆಂಗಳೂರು ಆಯುಕ್ತರ ಕಚೇರಿಗೆ ಕರೆದುಕೊಂಡು ಬಂದಿದ್ದಾಗ, ಆರೋಪಿಯ ಕಾರಿನಲ್ಲಿದ್ದ ಹಣವನ್ನು ಪೊಲೀಸ್ ಸಿಬ್ಬಂದಿ ಕಳ್ಳತನ ಮಾಡಿದ್ದಾರೆ. ಆರೋಪಿಯನ್ನು ವಿಚಾರಣೆಗೆ ಕರೆದುಕೊಂಡು ಬಂದಿದ್ದ ವೇಳೆ ಲಕ್ಷಾಂತರ ರೂಪಾಯಿ ಹಣವನ್ನು ಪೊಲೀಸ್ ಸಿಬ್ಬಂದಿ ಕಳ್ಳತನ ಮಾಡಿದ್ದಾರೆ.
ಇತ್ತೀಚೆಗೆ ಸೈಬರ್ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರನ್ನು ಬಂಧಿಸಲಾಗಿತ್ತು. ಆರೋಪಿ ಮತ್ತು ಆತನ ಕಾರನ್ನು ಸಿಸಿಬಿ ಅಧಿಕಾರಿಗಳು ಕಮಿಷನರ್ ಕಚೇರಿ ತೆಗೆದುಕೊಂಡ ಬಂದಿದ್ದರು. ಈ ವೇಳೆ ಕಾರಿನಲ್ಲಿ 11 ಲಕ್ಷ ರೂ ಹಣವಿತ್ತು. ಈ ಹಣವನ್ನು ಹೆಡ್ ಕಾನ್ಸ್ಟೇಬಲ್ ಜಬಿವುಲ್ಲಾ ಕಳ್ಳತನ ಮಾಡಿದ್ದಾರೆ. ಕಳ್ಳತನ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಇತ್ತೀಚೆಗೆ ಸೈಬರ್ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರನ್ನು ಬಂಧಿಸಲಾಗಿತ್ತು. ಆರೋಪಿ ಮತ್ತು ಆತನ ಕಾರನ್ನು ಸಿಸಿಬಿ ಅಧಿಕಾರಿಗಳು ಕಮಿಷನರ್ ಕಚೇರಿ ತೆಗೆದುಕೊಂಡ ಬಂದಿದ್ದರು. ಈ ವೇಳೆ ಕಾರಿನಲ್ಲಿ 11 ಲಕ್ಷ ರೂ ಹಣವಿತ್ತು. ಈ ಹಣವನ್ನು ಹೆಡ್ ಕಾನ್ಸ್ಟೇಬಲ್ ಜಬಿವುಲ್ಲಾ ಕಳ್ಳತನ ಮಾಡಿದ್ದಾರೆ. ಕಳ್ಳತನ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹಣ ಕಳ್ಳತನ ಮಾಡಿ ಏನು ಗೊತ್ತೇ ಇಲ್ಲ ಅನ್ನೋ ರೀತಿ ನಾಟಕ ಮಾಡಿದ್ದಾರೆ. ಸ್ವಲ್ಪ ದಿನದ ನಂತರ ಆರೋಪಿ ಜಾಮೀನು ತೆಗೆದುಕೊಂಡು ಜೈಲಿನಿಂದ ಹೊರ ಬಂದ ವೇಳೆ ಕಾರಿನಲ್ಲಿದ್ದ ಹಣದ ಬ್ಯಾಗ್ ನಾಪತ್ತೆಯಾಗಿದೆ.
ಈ ಬಗ್ಗೆ ಸಿಸಿಬಿ ಅಧಿಕಾರಿಗಳನ್ನು ಆರೋಪಿ ಪ್ರಶ್ನಿಸಿದ್ದಾರೆ. ಆರೋಪಿಯ ಮಾತು ಕೇಳಿ ಅಧಿಕಾರಿಗಳು ಗಾಬರಿಗೊಂಡು, ಹಣದ ಬ್ಯಾಗ್ ಹುಡುಕಲು ಶುರು ಮಾಡಿದ್ದಾರೆ. ಈ ವೇಳೆ ಸಿಸಿಬಿ ಕಚೇರಿ ಹೊರೆಗೆ ಇರುವ ಸಿಸಿಟಿವಿ ದೃಶ್ಯವನ್ನು ನೋಡಿದಾಗ ಹೆಡ್ ಕಾನ್ಸ್ಟೇಬಲ್ ಜಬಿವುಲ್ಲಾ ಹಣ ಬ್ಯಾಗ್ನ್ನು ಎತ್ತಿಕೊಂಡು ಹೋಗಿರುವುದು ಕಂಡು ಬಂದಿದೆ. ಸದ್ಯ 2 ಲಕ್ಷ ಹಣ ವಾಪಸ್ ಕೊಟ್ಟಿದ್ದು, ಉಳಿದ ಹಣವನ್ನು ತಕ್ಷಣವೇ ನೀಡುವಂತೆ ಆದೇಶ ನೀಡಿದ್ದಾರೆ. ಈ ಬಗ್ಗೆ ಪೊಲೀಸರು ಮೇಲಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.


