ವಾರಾಹಿ ಗೋಲ್ಡ್‌ನ ಕೋಟಿ, ಕೋಟಿ ವಂಚನೆ ಪ್ರಕರಣ ಸಾಕಷ್ಟು ಸದ್ದು ಮಾಡುತ್ತಿದ್ದಂತೆ ಪ್ರಕರಣದ ಮೂವರು ಆರೋಪಿಗಳು ನಾಪತ್ತೆಯಾಗಿದ್ದರು. ಅದರಲ್ಲಿ ಐಶ್ವರ್ಯ ಗೌಡ, ಪತಿ ಹರೀಶ್ ಪೊಲೀಸರ ಮುಂದೆ ಹಾಜರಾಗಿದ್ದಾರೆ. ಆದ್ರೆ ಡಿ.ಕೆ ಸುರೇಶ್ ಧ್ವನಿಯಲ್ಲಿ ಮಾತನಾಡಿ ಟೋಪಿ ಹಾಕಿದ್ದ ನಟ ಧರ್ಮೇಂದ್ರ ನಾಪತ್ತೆ ಆಗಿದ್ದಾನೆ. ಮೊಬೈಲ್ ಕೂಡ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ಸದ್ಯ ನಟ ಧರ್ಮೇಂದ್ರಗೆ ಪೊಲೀಸರು ನೋಟಿಸ್ ನೀಡಿದ್ದು ಶೋಧಕಾರ್ಯ ಮುಂದುವರೆಸಿದ್ದಾರೆ.
ಈ ಮಧ್ಯೆ 14 ಕೆ.ಜಿ ‘ಚಿನ್ನ’ ದೋಖಾ ಕೇಸ್ನಲ್ಲಿ ತಮ್ಮ ಹೆಸರು ಬಂದಿರುವ ಬಗ್ಗೆ ಇದೇ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಮಾಜಿ ಸಂಸದ ಡಿ.ಕೆ ಸುರೇಶ್, ನನ್ನ ಹೆಸರನ್ನ ದುರ್ಬಳಕೆ ಮಾಡಿಕೊಂಡಿದ್ದಾರೆ. ಕ್ರಮ ಕೈಗೊಳ್ಳುವಂತೆ ದೂರು ಕೊಡುತ್ತೇನೆ. ಕಮಿಷನರ್ಗೂ ಪತ್ರ ಬರೆಯುತ್ತೇನೆ ಅಂತ ಎಚ್ಚರಿಸಿದ್ದಾರೆ.