ಲೋಕಸಭಾ ಚುನಾವಣೆಗೆ ಕೌಂಟ್ಡೌನ್ ಶುರುವಾಗಿದೆ. ಈಗಾಗಲೇ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಪಕ್ಷಗಳು ಪ್ರಚಾರ ಕಾರ್ಯವನ್ನೂ ಆರಂಭಿಸಿದೆ. ಮತ್ತೊಂದೆಡೆ ಟಿಕೆಟ್ ಆಕಾಂಕ್ಷಿಗಳು ಟಿಕೆಟ್ ಸಿಗದ ಬೇಸರದಲ್ಲಿ ಪಕ್ಷದ ವಿರುದ್ಧ ಬಂಡಾಯ ಭುಗಿಲೆದಿದೆ. ವಿಶೇಷವಾಗಿ ರಾಜ್ಯ ಬಿಜೆಪಿಯಲ್ಲಿ ಟಿಕೆಟ್ ವಂಚಿತರ ಬಂಡಾಯದ ಕೂಗು ಜೋರಾಗಿಯೇ ಕೇಳಿ ಬರುತ್ತಿದೆ. ಆದರೆ ಬಿಜೆಪಿಯಲ್ಲಿ ಭುಗಿಲೆದ್ದಿರುವ ಬಂಡಾಯದ ಲಾಭವನ್ನು ಪಡೆಯಲು ಕಾಂಗ್ರೆಸ್ ಪ್ರಯತ್ನಿಸಿದೆ. ರಾಜ್ಯ ಬಿಜೆಪಿಯ ಹಿರಿಯ ನಾಯಕ, ಮಾಜಿ ಸಿಎಂಗೆ ಗಾಳ ಹಾಕಲಾಗಿದ್ದು, ಟಿಕೆಟ್ ನೀಡಲು ಯಾವುದಾದರೂ ಒಂದು ಕ್ಷೇತ್ರದಲ್ಲಿ ಸದಾನಂದಗೌಡರಿಗೆ ಸ್ಥಾನ ಕಲ್ಪಿಸಲು ಕಾಂಗ್ರೆಸ್ ಪಾಳಯದಲ್ಲಿ ಚಿಂತನೆ. ಇತ್ತೀಚೆಗೆ ಬಂದ ವರದಿಗಳ ಪ್ರಕಾರ ಸದಾನಂದಗೌಡರಿಗೆ ಮೈಸೂರು, ಮಡಿಕೇರಿ ಕ್ಷೇತ್ರಗಳಿಗೆ ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ ಮಾಡ್ತಿದೆ. ಯಾವುದಾದರೂ ತೀರ್ಮಾನ ನಾಳೆ ಬಹಿರಂಗವಾಗಲಿದೆ. ಕಾಂಗ್ರೆಸ್ ಪಕ್ಷದಿಂದ ಆಫರ್ ನೀಡಲಾಗಿದೆ ಎಂದು ತಿಳಿದುಬಂದಿದೆ.
ಯೆಸ್. ಬಿಜೆಪಿಯ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದ್ರೆ ಬಿಜೆಪಿ ಹೈಕಮಾಂಡ್ ಬಿಎಸ್ ಯಡಿಯೂರಪ್ಪ ಶಿಫಾರಾಸಿನ ಮೇರೆಗೆ, ಬಿಎಸ್ವೈ ಆಪ್ತೆ ಶೋಭಾ ಕರಂದ್ಲಾಜೆ ಬೆಂಗಳೂರು ಉತ್ತರಕ್ಕೆ ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಇದರಿಂದ ಡಿವಿಎಸ್ ಬೇಸರಗೊಂಡಿದ್ದರೂ ಸಹ ಪಕ್ಷದ ವಿರುದ್ಧ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿರಲಿಲ್ಲ. ಆದರೆ ಅವರ ಮನದ ನೋವನ್ನು ಅರಿತಿರುವ ಕಾಂಗ್ರೆಸ್ ಡಿವಿಎಸ್ಗೆ ಗಾಳ ಹಾಕಿದೆ.
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಡಿವಿ ಸದಾನಂದ ಗೌಡಗೆ ಟಿಕೆಟ್ ತಪ್ಪಿದ ಬೆನ್ನಲ್ಲೇ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೆಳೆಯಲು ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಯತ್ನ ಪಟ್ಟಿದ್ದು, ನೀವು ಕಾಂಗ್ರೆಸ್ಗೆ ಬಂದರೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದಲೇ ಟಿಕೆಟ್ ನೀಡುವ ಭರವಸೆಯನ್ನು ನೀಡಿದ್ದಾರೆ ಎಂದು ತಿಳಿದುಬಂದಿದೆ.
ಸದ್ಯ ಕಾಂಗ್ರೆಸ್ಗೆ ಬೆಂಗಳೂರು ಲೋಕಸಭಾ ಕ್ಷೇತ್ರದಿಂದ ಸೂಕ್ತ ಅಭ್ಯರ್ಥಿ ಸಿಕ್ಕಿಲ್ಲ. ಈ ಹಿನ್ನೆಲೆ ಡಿವಿ ಸದಾನಂದ ಗೌಡರನ್ನು ಪಕ್ಷಕ್ಕೆ ಸೆಳೆದು ಕಾಂಗ್ರೆಸ್ನಿಂದ ಕಣಕ್ಕಿಳಿಸುವ ತಂತ್ರವನ್ನು ಡಿಕೆಶಿ ಮಾಡಿದ್ದಾರೆ ಎನ್ನಲಾಗ್ತಿದೆ. ಕಾಂಗ್ರೆಸ್ ಪಕ್ಷಕ್ಕೆ ಸೆಳೆಯಲು ಡಿಸಿಎಂ ಪ್ರಯತ್ನ ಪಟ್ಟ ಬೆನ್ನಲ್ಲ, ನಾಳೆ ಮಾಜಿ ಸಿಎಂ ಡಿವಿ ಸದಾನಂದ ಗೌಡ ಮಹತ್ವದ ಸುದ್ದಿಗೋಷ್ಠಿಯನ್ನು ಕರೆದಿದ್ದು, ಭಾರೀ ಕುತೂಹಲ ಕೆರಳಿಸಿದೆ. ನಾಳೆ ನಡೆಯುವ ಸುದ್ದಿಗೋಷ್ಠಿಯಲ್ಲಿ ಡಿವಿ ಸದಾನಂದ ಗೌಡ ತಮ್ಮ ಮುಂದಿನ ನಡೆಯ ಬಗ್ಗೆ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ. ಬಿಜೆಪಿಯಲ್ಲೇ ಇರುತ್ತಾರೋ ಅಥವಾ ಕಾಂಗ್ರೆಸ್ಗೆ ಸೇರುತ್ತಾರೋ ಅಥವಾ ರಾಜಕೀಯ ನಿವೃತ್ತಿ ಘೋಷಿಸುತ್ತಾರೋ ಅನ್ನೋದನ್ನು ಕಾದು ನೋಡಬೇಕಿದೆ.