Wednesday, April 30, 2025
24.6 C
Bengaluru
LIVE
ಮನೆರಾಜಕೀಯಅಮಿತ್‌ ಶಾ ಭೇಟಿಯಾದ ಸಿಎಂ ಸಿದ್ದರಾಮಯ್ಯ

ಅಮಿತ್‌ ಶಾ ಭೇಟಿಯಾದ ಸಿಎಂ ಸಿದ್ದರಾಮಯ್ಯ

ನವದೆಹಲಿ : ಇಂದು ಸಿಎಂ ಸಿದ್ದರಾಮಯ್ಯರವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಹಾರದ ಕುರಿತು ಚರ್ಚೆ ನಡೆಸಿದರು. ರಾಜ್ಯದ 236 ತಾಲ್ಲೂಕುಗಳಲ್ಲಿ 223 ತಾಲ್ಲೂಕುಗಳು ಬರ ಪೀಡಿತವಾಗಿವೆ. ರಾಜ್ಯದ ರೈತರು ಸಂಕಷ್ಟದಲ್ಲಿದ್ದಾರೆ. ಕೂಡಲೇ ಉನ್ನತ ಮಟ್ಟದ ಸಮಿತಿ ಸಭೆ ನಡೆಸಿ, 18,177.44 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಇದರಲ್ಲಿ 4663.12 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ, 12,577.86 ಕೋಟಿ ರೂ. ತುರ್ತು ಪರಿಹಾರ, 566.78 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363.68 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಕೋರಲಾಗಿದೆ.

ರಾಜ್ಯ ಬರ ಅಧ್ಯಯನ ತಂಡ ಭೇಟಿ ನೀಡಿ ಪ್ರಸ್ತಾವನೆ ಸಲ್ಲಿಸಿದ ಬಳಿಕ, ಇನ್ನೂ 21 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಆದ್ದರಿಂದ ಅಕ್ಟೋಬರ್‌ 20 ರಂದು ಕೇಂದ್ರ ಕೃಷಿ ಸಚಿವಾಲಯಕ್ಕೆ ಎನ್‌.ಡಿ.ಆರ್.ಎಫ್. ಅಡಿ 17,901.73 ಕೋಟಿ ರೂ. ಪರಿಹಾರ ಒದಗಿಸುವಂತೆ ಪ್ರಸ್ತಾವನೆ ಸಲ್ಲಿಸಲಾಯಿತು. ಇದರಲ್ಲಿ ತುರ್ತು ಪರಿಹಾರದ 12,577.86 ಕೋಟಿ ರೂ. ಮೊತ್ತವೂ ಸೇರಿದೆ. ನವೆಂಬರ್‌ 4 ರಂದು ಹೆಚ್ಚುವರಿಯಾಗಿ 7 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಈ ಹಿನ್ನೆಲೆಯಲ್ಲಿ ಸಲ್ಲಿಸಿದ ಪೂರಕ ಮನವಿಯೊಂದಿಗೆ ಕೇಂದ್ರದಿಂದ 18,177.44 ಕೋಟಿ ರೂ. ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಯಿತು.

ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ರಾಜ್ಯಸಭಾ ಸದಸ್ಯರಾದ ಜೆ.ಸಿ.ಚಂದ್ರಶೇಖರ್, ಹನುಮಂತಯ್ಯ ಉಪಸ್ಥಿತರಿದ್ದರು. ಗೃಹಸಚಿವ ಅಮಿತ್​​ ಶಾ ಜೊತೆ ಉನ್ನತ ಮಟ್ಟದ ಸಭೆ ನಡೆಸಿ, ಪರಿಹಾರ ಬಿಡುಗಡೆ ಮಾಡಲು ಆಗ್ರಹಿಸಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments