ಮುಂಬೈ: ಮುಂಬೈ ಬಿಎಂಡಬ್ಲ್ಯೂ ಹಿಟ್ ಆ್ಯಂಡ್ ರನ್ ಪ್ರಕರಣದ ಪ್ರಮುಖ ಆರೋಪಿ ಮಿಹಿರ್ ಶಾನನ್ನು ಮಂಗಳವಾರ ಸಂಜೆ ಬಂಧಿಸಲಾಗಿದೆ. ಆರೋಪಿ ಮತ್ತು ಆತನ ತಾಯಿ, ಇಬ್ಬರು ಸಹೋದರಿಯರು ಸೇರಿದಂತೆ ಒಟ್ಟು 12 ಜನರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಶಿವಸೇನಾ ಬಣದ ಮುಖಂಡ ರಾಜೇಶ್ ಶಾ ಅವರ ಮಗ ಕೃತ್ಯದ ಬಳಿಕ ಪರಾರಿಯಾಗಿದ್ದ. ಆರೋಪಿ ಪತ್ತೆಗೆ ಬಲೆ ಬೀಸಿದ್ದ ಪೊಲೀಸರು ಮೂರು ದಿನಗಳ ಬಳಿಕ ಬಂಧಿಸಿದ್ದಾರೆ. ಆರೋಪಿ ತಪ್ಪಿಸಿಕೊಳ್ಳಲು ತಾಯಿ ಮತ್ತು ಸಹೋದರಿಯರು ಶಾಗೆ ಸಹಾಯ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಂಬೈನಿಂದ 65 ಕಿಮೀ ದೂರದಲ್ಲಿರುವ ವಿರಾರ್‌ನಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಮಿಹಿರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಆತನನ್ನು ವರ್ಲಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ.
ಮೂರು ದಿನಗಳ ಹಿಂದಷ್ಟೇ ಮುಂಬೈನಲ್ಲಿ ಹಿಟ್ ಹಿಟ್ ಆ್ಯಂಡ್ ರನ್ ಪ್ರಕರಣ ವರದಿಯಾಗಿತ್ತು. ಅಪಘಾತಕ್ಕೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಆಕೆ ಪತಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜಕಾರಣಿ ಪುತ್ರ ಮಿಹಿರ್ ಶಾ ಕಾರು ಹಿಟ್ ಆ್ಯಂಡ್ ರನ್ ಮಾಡಿ ಪರಾರಿಯಾಗಿತ್ತು. ಕಾರನ್ನು ಮಿಹಿರ್ ಚಲಾಯಿಸಿದ್ದ, ಈ ವೇಳೆ ಕುಡಿದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com
Phone Number : +91-9164072277
Email id : salesatfreedomtv@gmail.com


