ಬೆಂಗಳೂರು: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆ ಹೊಸ ಮೈಲಿಗಲ್ಲು ಸಾಧಿಸಿದೆ. ಶಕ್ತಿ ಯೋಜನೆಯಡಿ ಉಚಿತ ಬಸ್ ಪ್ರಯಾಣ ಮಾಡಿದ ಮಹಿಳಾ ಪಲಾನುಭವಿಗಳ ಸಂಖ್ಯೆ 500 ಕೋಟಿ ದಾಟಿದೆ.
ಮಹಿಳಾ ಪ್ರಯಾಣಿಕರ ಪ್ರಯಾಣದ ಸಂಖ್ಯೆ 500 ಕೋಟಿ ದಾಟಿರುವ ಹಿನ್ನೆಲೆ ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ಸಾಂಕೇತಿಕವಾಗಿ ಮಹಿಳೆಯರಿಗೆ ಟಿಕೆಟ್ ನೀಡಿದ್ದಾರೆ. 500ನೇ ಕೋಟಿಯ ಟಿಕೆಟ್ ಅನ್ನು ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ವಿತರಣೆ ಮಾಡಿದ್ದಾರೆ. ಈ ವೇಳೆ ಸಚಿವರಾದ ರಾಮಲಿಂಗಾ ರೆಡ್ಡಿ, ಹೆಚ್.ಸಿ ಮಹದೇವಪ್ಪ ಉಪಸ್ಥಿತರಿದ್ದರು.
ಪಂಚ ಗ್ಯಾರಂಟಿಗಳಲ್ಲಿ ಒಂದಾ ಶಕ್ತಿ ಯೋಜನೆಗೆ ಜೂನ್.11, 2023ರಂದು ಚಾಲನೆ ನೀಡಲಾಗಿತ್ತು. ಅಂದಿನಿಂದ ರಾಜ್ಯದ ನಾಲ್ಕು ನಿಗಮಗಳಾದ ಬೆಂಗಳೂರು ಮಹಾನಗರ ಸಾರಿಗೆ ನಿಗಮ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಮತ್ತು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ಳಲ್ಲಿ 500 ಕೋಟಿ ಮಹಿಳೆಯರು ಪ್ರಯಾಣ ಮಾಡಿದ್ದಾರೆ.
ಶಕ್ತಿ ಯೋಜನೆಯಡಿ ಮಹಿಳಾ ಪ್ರಯಾಣಿಕರು ಉಚಿತ ಟಿಕೆಟ್ ಪಡೆದು ಪ್ರಯಾಣಿಸಿದ ಮೌಲ್ಯ ಅಂದಾಜು 12.699 ಕೋಟಿ ರೂಪಾಯಿಗಳಾಗಿದೆ. ಪ್ರತಿ ದಿನ ಅಂದಾಜು 80 ಲಕ್ಷಕ್ಕೂ ಹೆಚ್ಚಿನ ಮಹಿಳಾ ಪ್ರಯಾಣಿಕರು ಶಕ್ತಿ ಯೋಜನೆಯಡಿ ಉಚಿತ ಟಿಕೆಟ್ ಪಡೆದು ಪ್ರಯಾಣಿಸುತ್ತಿದ್ದಾರೆ


