ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಅಚ್ಚರಿಯ ಅಭ್ಯರ್ಥಿಯಾಗಿ ಡಾ.ಕೆ.ಸುಧಾಕರ್ ವಿರುದ್ಧ ಶಾಸಕ ಪ್ರದೀಪ್ ಈಶ್ವರ್ ಗೆಲುವು ಸಾಧಿಸಿದ್ದರು. ಇವರ ಜತೆ ಇವರ ಮಾತುಗಳು ಸಹ ಮಾತುಗಳು ಗೆದ್ದಿದ್ದವು. ಹೌದು..ಚುನಾವಣೆಯಲ್ಲಿ ಪ್ರದೀಪ್ ಈಶ್ವರ್ ಅವರ ಮಾತು, ಡೈಲಾಗ್ಗಳೊಂದಿಗೆ ಗಮನ ಸೆಳೆದಿದ್ದರು. ಯಾವ ಸಿನಿಮಾ ಸ್ಟಾರ್ಗೆ ಕಮ್ಮಿ ಇಲ್ಲವಂತೆ ಡೈಲಾಗ್ ಹೊಡೆಯುವುದರಲ್ಲಿ ಫೇಮಸ್ ಆಗಿದ್ದಾರೆ. ಇದೀಗ ಇವರಿಗೆ ಟಾಲಿವುಡ್‌ನಲ್ಲಿ ಭಾರೀ ಬೇಡಿಕೆ ಬಂದಿದೆ. ಹೌದು…ಮೆಗಾಸ್ಟಾರ್ ಚಿರಂಜೀವಿ ಜೊತೆ ನಟಿಸಲು ಪ್ರದೀಪ್ ಈಶ್ವರ್‌ಗೆ ಆಫರ್ ಬಂದಿದೆ.
ಮೆಗಾಸ್ಟಾರ್ ಚಿರಂಜೀವಿ ಜೊತೆ ನಟಿಸಲು ಆಫರ್
ಟಾಲಿವುಡ್ ಚಿತ್ರರಂಗದ ದಿಗ್ಗಜ ಮೆಗಾಸ್ಟಾರ್ ಚಿರಂಜೀವಿಯವರು ಸಾಮಾಜಿಕ ಕ್ರಾಂತಿಯ ಚಲನಚಿತ್ರವೊಂದರಲ್ಲಿ ನಟಿಸಲು ಸನ್ನದರಾಗುತ್ತಿದ್ದಾರಂತೆ. ಇದರಿಂದ ಚಿರಂಜೀವಿ ಜೊತೆ ಬಣ್ಣ ಹಚ್ಚಿ ನಟಿಸಲು ಶಾಸಕ ಪ್ರದೀಪ್‌ಈಶ್ವರ್‌ಗೆ ಕರೆ ಬಂದಿದೆಯಂತೆ. ಸ್ವತಃ ಮೆಗಸ್ಟಾರ್ ಚಿರಂಜೀವಿಯವರ ಚಲನಚಿತ್ರವನ್ನು ನಿರ್ದೇಶಿಸುತ್ತಿರುವ ಖ್ಯಾತ ನಿರ್ದೇಶಕರೊಬ್ಬರು ಮೊನ್ನೆ ಶಾಸಕ ಪ್ರದೀಪ್‌ಈಶ್ವರ್‌ಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆಂದು ಶಾಸಕ ಪ್ರದೀಪ್‌ಈಶ್ವರ್ ಟಿವಿ9ಗೆ ಮಾಹಿತಿ ನೀಡಿದ್ದಾರೆ.