ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಗಳ ಮೇಲಿನ ಆದೇಶವನ್ನು ಹೈಕೋರ್ಟ್ ಅ.21ಕ್ಕೆ ಪ್ರಕಟಿಸಲಿದೆ. ಒಂದು ಪ್ರಕರಣದಲ್ಲಿ ಜಾಮೀನು ಹಾಗೂ ಇನ್ನೆರಡು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ ಅರ್ಜಿಗಳನ್ನು ವಿಚಾರಣೆ ನಡೆಸಿ ಕಾಯ್ದಿರಿಸಲಾಗಿದ್ದ ಆದೇಶವನ್ನು ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ಪ್ರಕಟಿಸಲಿದೆ. ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಜಾಮೀನು ಕೋರಿದ್ದರೆ, ಸಿಐಡಿ ಸೈಬರ್ ಸೆಲ್‌ನಲ್ಲಿ ದಾಖಲಾಗಿದ್ದ ಇನ್ನೆರಡು ಪ್ರಕರಣ ಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದಾರೆ.