ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಪೆನ್‌ಡ್ರೈವ್‌ನಲ್ಲಿ ಇರುವ ಮತ್ತು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಅಶ್ಲೀಲ ವಿಡಿಯೋಗಳು ಅಸಲಿ ಎನ್ನುವುದು ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಯಲ್ಲಿ ದೃಢಪಟ್ಟಿದೆ. ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿದ ಆರೋಪದಡಿ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಅಶ್ಲೀಲ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ಎಸ್‌ಐಟಿ ಎಲ್ಲಾ ವಿಡಿಯೋಗಳನ್ನು ಸಂಗ್ರಹಿಸಿ ಎಫ್‌ಎಸ್‌ಎಲ್‌ಗೆ ಕಳುಹಿಸಿತ್ತು.
ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಆದರೆ, ಆ ವಿಡಿಯೋ ನಕಲಿ, ವಿರೋಧಿಗಳು ಎಡಿಟ್, ಮಾರ್ಫಿಂಗ್ ಮಾಡಿದ್ದಾರೆ ಎಂದು ಹೇಳಲಾಗಿತ್ತು. ಬಳಿಕ ಎಸ್‌ಐಟಿ ವಿಡಿಯೋಗಳ ಅಸಲಿಯತ್ತು ತಿಳಿಯಲು ಎಫ್‌ಎಸ್‌ಎಲ್‌ಗೆ ಕಳುಹಿಸಿತ್ತು. ಇದೀಗ ವಿಡಿಯೋಗಳ ಎಫ್ಎಸ್ಎಲ್ ವರದಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದ ಅಶ್ಲೀಲ ವಿಡಿಯೋ ಅಸಲಿ ಎಂಬುದು ಸಾಬೀತಾಗಿದೆ. ಇನ್ನು ವಿಡಿಯೋದಲ್ಲಿರುವ ವ್ಯಕ್ತಿಗೂ, ಬಂಧಿತ ಆರೋಪಿಯೇ ಎಂಬುದು ಇನ್ನೂ ಸಾಬೀತಾಗಿಲ್ಲ. ಈ ಸಂಬಂಧ ಇನ್ನಷ್ಟೇ ವರದಿ ಬರಬೇಕಿದೆ.