ಹುಬ್ಬಳ್ಳಿ ; ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿಂದು ಮಾತನಾಡಿದ ಅವರು, ಕಾನೂನು ತನ್ನದೇ ಆದ ಪ್ರಕ್ರಿಯೆ ನಡೆಸಲಿದೆ . ಕಾನೂನಾತ್ಮಕವಾಗಿ ಪ್ರಜ್ವಲ್ ರೇವಣ್ಣ ಶರಣಾಗಿದ್ದಾನೆ . ಎಸ್ ಐ ಟಿ ಯವರು ಕಟ್ಟಿಬದ್ಧವಾಗಿ ತನಿಖೆ ಮಾಡಬೇಕು. ಪ್ರಕರಣದಲ್ಲಿನ ಸಂತ್ರಸ್ತರಿಗೆ ನ್ಯಾಯ ಸಿಗಬೇಕು.
ಈ ನಿಟ್ಟಿನಲ್ಲಿಯೇ ತನಿಖೆ ನಡೆಯಬೇಕೆಂಬುದು ರಾಜ್ಯದ ಜನರ ಇಚ್ಛೆಯಾಗಿದೆ ಎಂದರು.
ಪ್ರಜ್ವಲ್ ಪ್ರಕರಣ ರಾಜಕೀಯ ಪ್ರೇರಿತ ಎಂಬ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಪ್ರಕರಣ ಯಾವ ರೀತಿ ಬೆಳಕಿಗೆ ಬಂದಿತು . ಯಾರು ಪೆನ್ ಡ್ರೈವ್ ಹಂಚಿಕೆ ಮಾಡಿದರು, ಯಾಕೆ ಮಾಡಿದರು . ಇದೆಲ್ಲವನ್ನು ನೋಡಿದಾಗ ಇದರಲ್ಲಿ ರಾಜಕಾರಣ ಬೆರೆತಿರೋದು ಸ್ಪಷ್ಟ .ಘಟನೆಯ ಸಂತ್ರಸ್ತರಿಗೆ ನ್ಯಾಯ ಕೊಡುವುದು ಒಂದು ಭಾಗ. ಇಂತಹ ವಿಚಾರಗಳನ್ನು ಪ್ರಚಾರ ಮಾಡದು ಕಾನೂನು ವಿರುದ್ಧ ಎಸ್ ಐ ಟಿ ತನಿಖೆ ಮಾಡಬೇಕು. ನಿಷ್ಪಕ್ಷಪಾತ ತನಿಖೆ ಆಗುತ್ತೆ ಅನ್ನೋದನ್ನ ಕಾದು ನೋಡಬೇಕು ಎಂದರು.
ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಸಿಬಿಐ ತನಿಖೆಗೆ ಯೋಗ್ಯವಾದ ಪ್ರಕರಣ ಎಂದರು.