ಸಿನಿಮಾ
ಬೆಂಗಳೂರು ಮತದಾರರ ಪಟ್ಟಿಯಿಂದ ಪ್ರಕಾಶ್ ರೈ ಹೆಸರು ಡಿಲೀಟ್!
Prakash Rai's name deleted from Bengaluru voter list!

ಬೆಂಗಳೂರು : ರಾಜ್ಯದಲ್ಲಿ SIR ಪ್ರಕ್ರಿಯೆ ಅಂತಿಮ ಘಟ್ಟಕ್ಕೆ ತಲುಪಿದ್ದು, ಬೆಂಗಳೂರಿನಲ್ಲೇ 49 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ಡೀಲಿಟ್ ಮಾಡುವ ಸಾಧ್ಯತೆಯಿದೆ.
ಬೆಂಗಳೂರು ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರೈ ಹೆಸರು ಡಿಲೀಟ್ ಮಾಡಲಾಗಿದೆ. ಈ ಬಗ್ಗೆ ಇನ್ಸ್ಟಾಗ್ರಾಂನಲ್ಲಿ ಖುದ್ದು ಪ್ರಕಾಶ್ ರೈ ಮಾಹಿತಿ ಹಂಚಿಕೊಂಡಿದ್ದಾರೆ.
ಬೆಂಗಳೂರಿನ ಶಾಂತಿನಗರ ವಿಧಾನಸಭಾ ಕ್ಷೇತ್ರದಲ್ಲಿ ಮತದಾನದ ಹಕ್ಕು ಹೊಂದಿದ್ದ ನಟ ಪ್ರಕಾಶ್ ರೈ ಅವರ ಹೆಸರು ಮತದಾರರ ಪಟ್ಟಿಯಿಂದ ಕೈಬಿಡಲ್ಪಟ್ಟಿದೆ. ಪ್ರಕಾಶ್ ರೈ ವಿರುದ್ಧ ಒಂದಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಮತದಾನದ ಹಕ್ಕು ಹೊಂದಿರುವ ಆರೋಪವಿದೆ.
ತೆಲಂಗಾಣದ ಸೆರಿಲಿಂಗಪಲ್ಲಿಯ ಮತದಾರರ ಪಟ್ಟಿಯಲ್ಲೂ ನಟ ಪ್ರಕಾಶ್ ರೈ ಹೆಸರು ಇದೆ. ಬಹು ಮತದಾರರ ಗುರುತಿನ ಚೀಟಿ ಹೊಂದಿರುವ ಆರೋಪಕ್ಕೆ ಸಂಬಂಧಿಸಿದಂತೆ ಈ ಹಿಂದೆ ಪ್ರಕಾಶ್ ರೈ ಮೇಲೆ ದೂರು ದಾಖಲಾಗಿತ್ತು.




