ಬೆಂಗಳೂರು: ಕೇಂದ್ರ ಸರ್ಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಧರ್ಮಸ್ಥಳ ಪ್ರಕರಣದ ಎಸ್ಐಟಿ ಮುಖ್ಯಸ್ಥರಾಗಿರುವ ಪ್ರಣವ್ ಮೊಹಾಂತಿಯವರ ಹೆಸರಿದ್ದು, ಅವರನ್ನು ಕೇಂದ್ರ ಸೇವೆಗೆ ಕಳುಕಹಿಸಲು ಸರ್ಕಾರ ನಿರ್ಧರಿಸಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಬಗ್ಗೆ ಬಹಳಷ್ಟು ತಪ್ಪು ಕಲ್ಪನೆಗಳನ್ನು ಹುಟ್ಟಿಹಾಕಲಾಗುತ್ತಿದೆ. ಡಿಜಿ ಹಂತದ ಅಧಿಕಾರಿಗಳನ್ನು ಎಸ್ಐಟಿ ಮುಖ್ಯಸ್ಥರನ್ನಾಗಿ ಮಾಡಬೇಕು ಎಂಬ ಕಾರಣದಿಂದ ಸರ್ಕಾರ ಪ್ರಣವ್ ಮೊಹಾಂತಿ ಅವರನ್ನು ನೇಮಕ ಮಾಡಿದೆ.ಕೇಂದ್ರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಅವರ ಹೆಸರಿದೆ ಅವರನ್ನು ಕೇಂದ್ರ ಸೇವೆ ಕಳುಹಿಸುವ ಬಗ್ಗೆ ಸರ್ಕಾರ ತೀರ್ಮಾನ ಮಾಡಿಲ್ಲ ಎಂದು ಹೇಳಿದ್ರು.
ಧರ್ಮಸ್ಥಳ ಪ್ರಕರಣದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಗಳು ಹರಿದಾಡುತ್ತಿದೆ. ಇದು ಸರಿ ಕಾಣುವುದಿಲ್ಲ. ಧರ್ಮಸ್ಥಳ ಪ್ರಕರಣದ ಸತ್ಯಾಂಶ ಹೊರಬರಬೇಕು ಎಂದು ಎಸ್ಐಟಿ ತನಿಖೆಗೆ ನೀಡಿದ್ದೇವೆ. ಎಸ್ಐಟಿ ತನಿಖೆ ನಡೆಸಿ ವರದಿ ಸಲ್ಲಿಸಿದ ಬಳಿಕ ಸತ್ಯಾಂಶ ಹೊರಗೆ ಬರಲಿದೆ. ನಮಗೆ ಬೇಕಾಗಿರುವುದು ಅದೇ ಎಂದು ಹೇಳಿದ್ದಾರೆ. ಇದರಲ್ಲಿ ಯಾವುದೇ ರಾಜಕೀಯವಿಲ್ಲ. ಯಾರನ್ನು ಉಳಿಸುವ ಪ್ರಶ್ನೆಯೂ ಇಲ್ಲ. ಯಾರನ್ನು ಸಿಕ್ಕಿಹಾಕಬೇಕು ಎಂದು ಸರ್ಕಾರಕ್ಕೆ ಉದ್ದೇಶವಿಲ್ಲ ಎಂದು ಹೇಳಿದ್ದಾರೆ.


