Wednesday, January 28, 2026
24.9 C
Bengaluru
Google search engine
LIVE
ಮನೆ#Exclusive Newsಕೆಆರ್‌ಎಸ್ ರಸ್ತೆ ವಿಚಾರಕ್ಕೆ ‘ಯೂ ಟರ್ನ್‘ ಹೊಡೆದ ಪ್ರತಾಪ್ ಸಿಂಹ ....!

ಕೆಆರ್‌ಎಸ್ ರಸ್ತೆ ವಿಚಾರಕ್ಕೆ ‘ಯೂ ಟರ್ನ್‘ ಹೊಡೆದ ಪ್ರತಾಪ್ ಸಿಂಹ ….!

ಮೈಸೂರು : ಕೆಆರ್‌ಎಸ್ ರಸ್ತೆಗೆ ಅಧಿಕೃತ ಹೆಸರಿಲ್ಲ, ಖಾಲಿ‌ ಇದೆ ಎನ್ನುವ ಕಾರಣಕ್ಕೆ ಸಿದ್ದರಾಮಯ್ಯ ಹೆಸರನ್ನು ಇಡಬಹುದು ಎಂದು ಹೇಳಿದ್ದೆ. ದಯವಿಟ್ಟು ನೋಟಿಫಿಕೇಷನ್ ವಾಪಸ್ ತೆಗೆದುಕೊಳ್ಳಿ. ತಕರಾರು ಸಲ್ಲಿಸುವವರು ದಾಖಲೆಯನ್ನ ಒದಗಿಸಿ. ವಿವಾದವನ್ನು ಇಲ್ಲಿಗೆ ಮುಗಿಸೋಣ. ಮೈಸೂರಿಗೆ ಮಹಾರಾಜರ ಕೊಡುಗೆ ಬಹಳಷ್ಟಿದೆ. ಜನಪ್ರತಿನಿಧಿಗಳ ಕೊಡುಗೆ ಕೂಡ ಇದೆ. ಇಟ್ಟಿರುವ ಹೆಸರನ್ನು ಬದಲಾಯಿಸುವ ದಾಷ್ಟ್ಯ ನಮಗೆ ಬೇಡ‌ ಎಂದಿದ್ದಾರೆ.

ಕೆಆರ್‌ಎಸ್ ರಸ್ತೆಗೆ  ಸಿಎಂ ಸಿದ್ದರಾಮಯ್ಯ  ಹೆಸರು ನಾಮಕರಣ‌ ಮಾಡುವ ವಿಚಾರದಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ  ಯೂ ಟರ್ನ್ ಹೊಡೆದಿದ್ದಾರೆ. ದಾಖಲೆಗಳಲ್ಲಿ ಮಹಾರಾಜರ ಕಾಲದಲ್ಲೇ ಪ್ರಿನ್ಸಸ್ ರಸ್ತೆ ಎಂದು ಹೆಸರಿದ್ದರೆ ಬದಲಾವಣೆ ಮಾಡುವುದು ಬೇಡ‌ ಎಂದು ಅವರು ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ಕೆಆರ್‌ಎಸ್ ರಸ್ತೆಗೆ ಪ್ರಿನ್ಸಸ್ ಎಂದು ಮಹಾರಾಜರ ಕಾಲದಲ್ಲೇ ಹೆಸರಿತ್ತು ಎನ್ನುವುದಾದರೇ ಬದಲಾವಣೆ ಮಾಡುವುದು ಬೇಡ. ಈ ವಿಚಾರಕ್ಕೆ ನನ್ನ ತಕರಾರಿಲ್ಲ. ಹೆಸರು ಬದಲಾವಣೆ ಮಾಡುವುದು ಬೇಡ‌ ಎಂದು ಸ್ಥಳೀಯ ಶಾಸಕ ಹರೀಶ್ ಗೌಡ ಅವರಿಗೆ ನಾನೇ ಮನವಿ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.

 

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments