Thursday, November 20, 2025
21.7 C
Bengaluru
Google search engine
LIVE
ಮನೆ#Exclusive NewsTop Newsಅಯೋಧ್ಯೆ ರಾಮಮಂದಿರಕ್ಕೆ ವರ್ಷದ ಸಂಭ್ರಮ : ಮೂರು ದಿನ ಉತ್ಸವ, ಏನೇನಿರಲಿವೆ ನೋಡಿ

ಅಯೋಧ್ಯೆ ರಾಮಮಂದಿರಕ್ಕೆ ವರ್ಷದ ಸಂಭ್ರಮ : ಮೂರು ದಿನ ಉತ್ಸವ, ಏನೇನಿರಲಿವೆ ನೋಡಿ

ಲಕ್ನೋ: ಅಯೋಧ್ಯೆ ರಾಮ ಮಂದಿರದ ವಾರ್ಷಿಕ ಪ್ರಾಣ ಪ್ರತಿಷ್ಠಾಪನೆಯನ್ನು ಜನವರಿ 22ರ ಬದಲಾಗಿ ಜನವರಿ 11ರಂದು ಆಚರಿಸಲಾಗುತ್ತಿದೆ. ಶುಭ ಯೋಗಗಳು ಹಾಗೂ ದ್ವಾದಶಿ ತಿಥಿಯು 2025ರಲ್ಲಿ ಜನವರಿ 11 ರಂದು ಬಂದಿರುವುದರಿಂದ ಆಚರಣೆ ಮಾಡಲಾಗ್ತಿದ್ದು, ಅಯೋಧ್ಯೆಯಲ್ಲಿ ಹಬ್ಬದ ವಾತಾವರಣ ಮನೆ ಮಾಡಿದೆ.

ಮೊದಲ ವಾರ್ಷಿಕೋತ್ಸವದ ಹಿನ್ನೆಲೆ ರಾಮಮಂದಿರ ಅಲಂಕಾರಕ್ಕೆ 50 ಕ್ವಿಂಟಾಲ್‌ ಹೂಗಳನ್ನ ಬಳಸಲಾಗಿದೆ. ಬಾಲರಾಮನ ದರ್ಶನಕ್ಕೆ ಬರುವ ಭಕ್ತರಿಗೆ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಲಾಗುತ್ತಿದೆ. ಭದ್ರತಾ ದೃಷ್ಟಿಯಿಂದ ಎಲ್ಲೆಡೆ ಸಿಸಿಟಿವಿ ಅಳವಡಿಕೆ ಮಾಡಲಾಗಿದೆ.

ದಿನಕ್ಕೆ 2 ಬಾರಿ ಅಗ್ನಿಹೋತ್ರ ಮಂತ್ರ ಪಠಣ:

ಇಂದಿನಿಂದ ಮೂರು ದಿನಗಳ ಕಾಲ ಹಲವು ಕಾರ್ಯಕ್ರಮಗಳು ನಡೆಯಲಿದೆ. ಇದರ ಭಾಗವಾಗಿ ಶುಕ್ಲ ಯಜುರ್ವೇದದಿಂದ ಅಗ್ನಿಹೋತ್ರ ಮಂತ್ರಪಠಣ ಮಾಡಲಾಗುತ್ತದೆ. ಬೆಳಗ್ಗೆ 8 ರಿಂದ 11 ಹಾಗೂ ಮಧ್ಯಾಹ್ನ 2 ರಿಂದ 5 ಗಂಟೆವರೆಗೆ ಮಂತ್ರ ಪಠಣ ಮಾಡಲಾಗುತ್ತದೆ. ಇದರೊಂದಿಗೆ ಲಕ್ಷ ರಾಮ ರಕ್ಷಾ ಸ್ತೋತ್ರ ಮತ್ತು ಹನುಮಾನ್ ಚಾಲೀಸಾ ಹಾಗೂ 6 ಲಕ್ಷ ಶ್ರೀ ರಾಮ ಮಂತ್ರದ ಪಠಣ ಮಾಡಲಾಗುತ್ತದೆ. ಮಂದಿರದ ನೆಲಮಾಳಿಗೆಯಲ್ಲಿ ಪ್ರತಿದಿನ ಮಧ್ಯಾಹ್ನ 3 ಗಂಟೆಯಿಂದ 5 ಗಂಟೆವರೆಗೆ ರಾಗ ಸೇವೆ, ಸಂಜೆ 6 ಗಂಟೆಗೆ ಅಭಿನಂದನಾ ಗೀತ ಸೇವೆ ಶ್ರೀರಾಮನಿಗೆ ಅರ್ಪಣೆಯಾಗಲಿದೆ. ಮೊದಲ ಮಹಡಿಯಲ್ಲಿ ಸಂಗೀತ ಮಾನಸ ಪಠಣ ನಡೆಯಲಿದೆ.

ಇಂದಿನಿಂದ 3 ದಿನ ಏನೇನು ಕಾರ್ಯಕ್ರಮ?
* ಜ.11ರ ಮೊದಲ ದಿನ ಪ್ರತಿಷ್ಠಾ ದ್ವಾದಶಿಯ ಆರಂಭಿಕ ದಿನ, ಕಳೆದ ವರ್ಷದ ‘ಪ್ರಾಣ ಪ್ರತಿಷ್ಠೆ’ ಕಾರ್ಯಕ್ರಮದಂತೆಯೇ ಕಾರ್ಯಕ್ರಮ ಆರಂಭ
* ‘ಪಂಚಾಮೃತ’ ಮತ್ತು ಸರಯೂ ಜಲದ ಅಭಿಷೇಕವನ್ನು ಒಳಗೊಂಡಂತೆ ಅಭಿಷೇಕ ಸಮಾರಂಭ ಬೆಳಗ್ಗೆ 10 ಗಂಟೆಗೆ ಶುರು
* ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಂದ ರಾಮಲಲ್ಲಾಗೆ ಅಭಿಷೇಕ
* ಮಧ್ಯಾಹ್ನ 12.20ಕ್ಕೆ ಪ್ರಾಥಮಿಕ ಆರತಿ
* ಚಿನ್ನದ ಮತ್ತು ಬೆಳ್ಳಿಯ ಎಳೆಗಳಿಂದ ದೆಹಲಿಯಲ್ಲಿ ತಯಾರಿಸಿದ ವಿಶಿಷ್ಟ ಪೀತಾಂಬರಿಯಿಂದ ರಾಮಲಲ್ಲಾ ಮೂರ್ತಿಯ ಅಲಂಕಾರ
* ಬಳಿಕ 3 ದಿನ ಕಾಲ ಮಂಟಪ ಮತ್ತು ಯಜ್ಞಶಾಲೆಯಲ್ಲಿ ವಿವಿಧ ಧಾರ್ಮಿಕ ವಿಧಿ ವಿಧಾನಗಳು, ಹೋಮಗಳು, ಶಾಸ್ತ್ರೀಯ ಸಾಂಸ್ಕೃತಿಕ ಪ್ರದರ್ಶನಗಳು, ವಿವಿಧ ಆಚರಣೆಗಳು ಮತ್ತು ದೈನಂದಿನ ರಾಮಕಥಾ ಪ್ರವಚನಗಳು ಏರ್ಪಾಡು
* 110 ಗಣ್ಯರು, ಜನಸಾಮಾನ್ಯರು ಸೇರಿ 5,000 ಜನರಿಗೆ ಕಾರ್ಯಕ್ರಮ ವೀಕ್ಷಿಸಲು ಅವಕಾಶ

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments