#Exclusive NewsTop Newsದೇಶ/ವಿದೇಶ

ಪ್ರಯಾಗ್​ರಾಜ್​ ಕಾಲ್ತುಳಿತ ಪ್ರಕರಣ : ಗಾಯಗೊಂಡ ಭಕ್ತರನ್ನು ಹೊತ್ತೊಯ್ಯುತ್ತಿದ್ದ ಆಂಬ್ಯುಲೆನ್ಸ್‌ಗೆ ಬೆಂಕಿ

ಪ್ರಯಾಗರಾಜ್ : ಬುಧವಾರ ಬೆಳಗ್ಗೆ ಮಹಾಕುಂಭದಲ್ಲಿ ನೂಕುನುಗ್ಗಲು ಉಂಟಾದಾಗ ಗಾಯಗೊಂಡ ಕಾಲ್ತುಳಿತ ಪ್ರಕರಣ ಉಂಟಾಗಿ ಸುಮಾರು 25-30 ಮಹಿಳೆಯರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೀಗೆ ಕರೆದೊಯ್ಯುವಾಗ ಆಂಬ್ಯುಲೆನ್ಸ್​ನಲ್ಲಿ ಬೆಂಕಿ ಕಾಣಿಸಿಕೊಂಡು ಗಾಯಾಳುಗಳನ್ನ  ಕೆಳಗಿಳಿಸಲಾಯಿತು. ಇಂದು ಕಾಲ್ತುಳಿತದಲ್ಲಿ 10ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಶಂಕೆ.

ಅಗ್ನಿಶಾಮಕಗಳನ್ನು ಬಳಸಿ  ಬೆಂಕಿಯನ್ನು ನಂದಿಸಲಾಯಿತು. ಪ್ರಯಾಗರಾಜ್‌ನಲ್ಲಿ ಮೌನಿ ಅಮವಾಸ್ಯೆಯ ಅಮೃತ ಸ್ನಾನದ ಸಂಗಮದಲ್ಲಿ ಲಕ್ಷಾಂತರ ಭಕ್ತರು ಪುಣ್ಯಸ್ನಾನಕ್ಕಾಗಿ ಸೇರಿದ್ದಾಗ   ಈ ಘಟನೆ ನಡೆದಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಕುಂಭಮೇಳದ ಪರಿಸ್ಥಿತಿಯನ್ನು ನಿರಂತರವಾಗಿ ಅವಲೋಕಿಸುತ್ತಿದ್ದಾರೆ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ಇಂದು ಬೆಳಿಗ್ಗೆಯಿಂದ ಯೋಗಿಯೊಂದಿಗೆ ಹಲವು ಬಾರಿ ಮಾತನಾಡಿದ್ದಾರೆ ಮತ್ತು ಪರಿಸ್ಥಿತಿಯನ್ನು ನಿಯಂತ್ರಿಸಲು ಮತ್ತು ಪರಿಹಾರಕ್ಕಾಗಿ ನಿರ್ದೇಶನಗಳನ್ನು ನೀಡುತ್ತಿದ್ದಾರೆ.

Comments (0)

Your email address will not be published. Required fields are marked *

Back to top button