Wednesday, December 10, 2025
19.8 C
Bengaluru
Google search engine
LIVE
ಮನೆ#Exclusive Newsತಮ್ಮಿಷ್ಟದ ಕಾಫಿ ಡೇ ಪಕ್ಕದಲ್ಲೆ ಎಸ್.ಎಂ.ಕೃಷ್ಣರ ಅಂತ್ಯಕ್ರಿಯೆಗೆ ಸಿದ್ಧತೆ......!

ತಮ್ಮಿಷ್ಟದ ಕಾಫಿ ಡೇ ಪಕ್ಕದಲ್ಲೆ ಎಸ್.ಎಂ.ಕೃಷ್ಣರ ಅಂತ್ಯಕ್ರಿಯೆಗೆ ಸಿದ್ಧತೆ……!

ಮಂಡ್ಯ : ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದು, ಅವರಿಗೆ 92 ವರ್ಷ ವಯಸ್ಸಾಗಿತ್ತು.

ಮಾಜಿ ಸಿಎಂ ಎಸ್. ಕೃಷ್ಣ ಅವರು ನಿಧನರಾಗಿದ್ದು, ಸದಾಶಿವನಗರದಲ್ಲಿರುವ ನಿವಾಸದಲ್ಲಿ ಇಂದು ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಆದರೆ, ಈಗಾಗಲೇ ಅವರ ತಂದೆ ಎಸ್.ಸಿ.ಮಲ್ಲಯ್ಯ ಹಾಗೂ ತಮ್ಮ ಎಸ್.ಎಂ.ಕೃಷ್ಣ ಅವರ ಅಂತ್ಯಕ್ರಿಯೆಯನ್ನು ಅವರ ವಿದ್ಯಾಸಂಸ್ಥೆಯ ಆವರಣದಲ್ಲಿ ನಡೆಸಲಾಗಿದೆ. ಅದೇ ರೀತಿ ಎಸ್.ಎಂ.ಕೃಷ್ಣ ಅವರ ಅಂತ್ಯಕ್ರಿಯೆ ಕೂಡ ನಡೆಸಲಾಗುತ್ತದೆ ಎಂದು ಭಾವಿಸಲಾಗಿತ್ತು. ಆದರೆ, ಅವರ ಕುಟುಂಬದ ನಿರ್ಧಾರದಂತೆ ಎಸ್.ಎಂ.ಕೃಷ್ಣ ಅವರ ತಮ್ಮಿಷ್ಟದ ಕಾಫಿ ಡೇ ಪಕ್ಕದಲ್ಲೆ ಅಂತ್ಯಕ್ರಿಯೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.

ಇನ್ನು ವಿದೇಶದಲ್ಲಿರುವ ಸಂಬಂಧಿಕರು ಆಗಮಿಸುವುದು ತಡವಾಗುವ ಹಿನ್ನೆಲೆಯಲ್ಲಿ ಎಸ್.ಕೃಷ್ಣ ಅವರ ಅಂತ್ಯಕ್ರಿಯೆಯನ್ನು ನಾಳೆ ನಡೆಸಲು ನಿರ್ಧರಿಸಲಾಗಿದೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments