ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಡಿಸೆಂಬರ್ 16ರಂದು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ನಡೆಯಲಿರುವ ಆದಿ ಜಗದ್ಗುರು ಶಿವರಾತ್ರೀಶ್ವರ ಶ್ರೀಗಳ 1066ನೇ ಜಯಂತಿಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಡಿಸೆಂಬರ್ 16 ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ನಡೆಯಲಿರುವ ಸುತ್ತೂರು ಶ್ರೀ ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ಆದಿ ಜಗದ್ಗುರು ಶ್ರೀ ಶಿವಯೋಗಿ ಸ್ವಾಮಿಜಿಗಳ 1066ನೇ ಜಯಂತಿಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ಧಾರೆ..
ಡಿಸೆಂಬರ್ 16ರಿಂದ 21ರವರೆಗೆ ನಡೆಯಲಿರುವ ಈ ಮಹೋತ್ಸವಕ್ಕಾಗಿ ಮಳವಳ್ಳಿಯ ಪುರಸಭೆ ಮೈದಾನವನ್ನು ವಿಶೇಷವಾಗಿ ಸಜ್ಜುಗೊಳಿಸಲಾಗಿದ್ದು, ಹಲವು ಸಾವಿರ ಭಕ್ತರು ಹಾಗೂ ಗೌರವಾನ್ವಿತರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮವನ್ನು ಮುಗಿಸಿದ ನಂತರ, ರಾಷ್ಟ್ರಪತಿ ಮುರ್ಮು ಅವರು ಸಂಜೆ 5.25ಕ್ಕೆ ಮಳವಳ್ಳಿಯಿಂದ ಮೈಸೂರಿಗೆ ಹಿಂದಿರುಗಲಿದ್ದಾರೆ. ನಂತರ ಅವರು ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ರಾತ್ರಿ ವಾಸ್ತವ್ಯ ಹೂಡಲಿದ್ದಾರೆ. ರಾಷ್ಟ್ರಪತಿಯ ವಾಸ್ತವ್ಯಕ್ಕೆ ಸಂಬಂಧಿಸಿದಂತೆ ಮೈಸೂರು ನಗರದಲ್ಲಿ ಕೂಡ ಭದ್ರತೆ ಹಾಗೂ ಸಂಚಾರ ವ್ಯವಸ್ಥೆಯನ್ನು ಬಿಗಿಗೊಳಿಸಲಾಗಿದೆ. ಕೇಂದ್ರ ಭದ್ರತಾ ಪಡೆಗಳು, ರಾಜ್ಯ ಪೊಲೀಸರು ಮತ್ತು ಎಸ್ಪಿಜಿ ಪಡೆಗಳು ಸಂಯುಕ್ತ ಪರಿಶೀಲನೆ ನಡೆಸಿ ಭದ್ರತಾ ತಯಾರಿಯನ್ನು ಸಂಪೂರ್ಣಗೊಳಿಸಿದ್ದು, ಮೈಸೂರು ವಿಮಾನ ನಿಲ್ದಾಣದಿಂದ ಹೋಟೆಲ್‌ವರೆಗಿನ ಮಾರ್ಗಗಳನ್ನು ಸುರಕ್ಷಿತ ವಲಯವೆಂದು ಘೋಷಿಸಲಾಗಿದೆ.


