Top Newsರಾಜಕೀಯಸುದ್ದಿ

ಪಕ್ಷದ ಅಧ್ಯಕ್ಷನಾಗಿ ಹೇಳುತ್ತಿದ್ದೇನೆ ಸಿದ್ದರಾಮಯ್ಯನವರು ರಾಜೀನಾಮೆ ಕೊಡುವ ಅಗತ್ಯವಿಲ್ಲ – DCM ಡಿಕೆಶಿ

ಬೆಂಗಳೂರು: “ಮುಖ್ಯಮಂತ್ರಿಗಳು ರಾಜೀನಾಮೆ ನೀಡುವ ಅಗತ್ಯವಿಲ್ಲ. ಹಳ್ಳಿಯಿಂದ ದೆಹಲಿವರೆಗೂ ಕಾಂಗ್ರೆಸ್ ಪಕ್ಷ ನಮ್ಮ ಮುಖ್ಯಮಂತ್ರಿಗಳ ಪರವಾಗಿ ನಿಲ್ಲಲಿದೆ. ಪಕ್ಷದ ಅಧ್ಯಕ್ಷನಾಗಿ ನಾನು ಈ ಮಾತು ಹೇಳುತ್ತಿದ್ದೇನೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಪ್ರತಿಕ್ರಿಯಿಸಿದರು. ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸ್ಪೀಕರ್ ಕೋಳಿವಾಡ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಕೆಪಿಸಿಸಿ ಅಧ್ಯಕ್ಷ ನಾನು, ಕೆಪಿಸಿಸಿ ಶಿಸ್ತು ಸಮಿತಿ ಅಧ್ಯಕ್ಷರು ರೆಹಮಾನ್ ಖಾನ್. ಇಲ್ಲಿ ನಾನೇ ಹೇಳುತ್ತಿದ್ದೇನೆಲ್ಲ. ಅವರ ರಾಜೀನಾಮೆ ಪ್ರಶ್ನೆಯೇ ಉದ್ಭವ ಆಗುವುದಿಲ್ಲ ಅಂತ ಎಂದು ಹೇಳಿದರು.

Comments (0)

Your email address will not be published. Required fields are marked *

Back to top button