ಉಡುಪಿ: ಶ್ರೀಕೃಷ್ಣಮಠದಲ್ಲಿ ನವೆಂಬರ್ 28ರಂದು ನಡೆಯುವ ಬೃಹತ್ ಗೀತೋತ್ಸವದ ಅಂಗವಾಗಿ ನಡೆಯುವ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸುತ್ತಿದ್ದಾರೆ..
ನವೆಂಬರ್ 28 ರಂದು ಜಿಲ್ಲೆಗೆ ಸಾರ್ವತ್ರಿಕ ಸ್ಥಳೀಯ ರಜೆ ಘೋಷಿಸುವಂತೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಪತ್ರದ ಮೂಲಕ ಉಡುಪಿ ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ.
ನವೆಂಬರ್ 28ರ ಶುಕ್ರವಾರದಂದು ನಮ್ಮ ದೇಶದ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿರವರು ಉಡುಪಿಯ ಶ್ರೀ ಕೃಷ್ಣ ಮಠ ಮತ್ತು ಪರ್ಯಾಯ ಪುತ್ತಿಗೆ ಮಠಗಳ ಆಶ್ರಯದಲ್ಲಿ ನಡೆಯುವ ಲಕ್ಷ ಕಂಠ ಗೀತಾ ಗಾಯನ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವುದು ತಮಗೆ ತಿಳಿದ ವಿಚಾರವಾಗಿದೆ.


