ಪ್ರಧಾನಿ ನರೇಂದ್ರ ಮೋದಿ ಕ್ರೈಸ್ತರ ಹಬ್ಬವಾದ ಕ್ರಿಸ್ಮಸ್ಗೆ ಶುಭಾಶಯ ತಿಳಿಸಿದ್ದಾರೆ. ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ನಿಮ್ಮೆಲ್ಲರಿಗೂ ಕ್ರಿಸ್ಮಸ್ ಶುಭಾಶಯಗಳು, ಜೀಸಸ್ನ ಬೋಧನೆಗಳು ಎಲ್ಲರಿಗೂ ಶಾಂತಿ ಮತ್ತು ಸಮೃದ್ಧಿಯ ಹಾದಿಯನ್ನು ತೋರಿಸಲಿ ಎಂದ ಪ್ರಧಾನಿ ಪ್ರೀತಿ, ಸಾಮರಸ್ಯ ಮತ್ತು ಸಹೋದರತ್ವದ ಮನೋಭಾವವನ್ನು ಬಲಪಡಿಸುವ ಮಹತ್ವವನ್ನು ಒತ್ತಿ ಹೇಳಿದರು.
ಕ್ರಿಸ್ ಮಸ್ ಹಬ್ಬದ ಪ್ರಯುಕ್ತ ನಿನ್ನೆ ಮಧ್ಯರಾತ್ರಿಯಿಂದಲೇ ಚರ್ಚ್ ಗಳಲ್ಲಿ ಪ್ರಾರ್ಥನೆ, ಹಬ್ಬದ ವಾತಾವರಣ ಸೃಷ್ಟಿಯಾಗಿದೆ. ಇಂದು ಪರಸ್ಪರ ಸಿಹಿ ಹಂಚಿ ಏಸುಕ್ರಿಸ್ತನ ಜನನ ದಿನದ ಸಂಭ್ರಮ ಆಚರಿಸಲಾಗುತ್ತಿದೆ.
ಪ್ರಧಾನಿ ಮೋದಿ ಸೋಷಿಯಲ್ ಮೀಡಿಯಾ ಖಾತೆ ಎಕ್ಸ್ ಮೂಲಕ ಕ್ರಿಸ್ ಮಸ್ ಹಬ್ಬಕ್ಕೆ ಶುಭ ಕೋರಿದ್ದಾರೆ. ‘ಎಲ್ಲಾ ಕ್ರಿಸ್ ಮಸ್ ಬಾಂಧವರಿಗೆ ಶಾಂತಿ, ಸಮಾಧಾನದ ಸಂಕೇತವಾದ ಕ್ರಿಸ್ ಮಸ್ ಹಬ್ಬದ ಶುಭಾಶಯಗಳು’ ಎಂದು ಶುಭಾಶಯ ಸಂದೇಶ ಬರೆದಿದ್ದಾರೆ.
ಪ್ರಧಾನಿ ಮಾತ್ರವಲ್ಲದೆ, ರಾಷ್ಟ್ರಪತಿ ದ್ರೌಪದಿ ಮುರ್ಮು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಅನೇಕ ರಾಜಕೀಯ ನಾಯಕರೂ ಕೂಡಾ ಎಕ್ಸ್ ಖಾತೆ ಮೂಲಕ ಕ್ರಿಸ್ ಮಸ್ ಹಬ್ಬದ ಶುಭಾಶಯ ಹೇಳಿದ್ದಾರೆ.