ಬೆಂಗಳೂರು: ತಾಯಿಯ ಅಗಲಿಕೆ ವೇಳೆ ಧೈರ್ಯದ ಮಾತುಗಳನ್ನಾಡಿ ಪತ್ರ ಬರೆದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಟ ಸುದೀಪ್ ಕೃತಜ್ಞತೆ ಸಲ್ಲಿಸಿದ್ದಾರೆ. ಈ ಬಗ್ಗೆ ಟ್ವಿಟ್ ಮಾಡಿರುವ ಅವರು, ‘ನಿಮ್ಮ ಸಹಾನುಭೂತಿಯ ಸಂತಾಪ ಪತ್ರಕ್ಕಾಗಿ ಪ್ರಾಮಾಣಿಕ ಧನ್ಯವಾದಗಳು.
ನಿಮ್ಮ ಚಿಂತನಶೀಲ ಮಾತುಗಳು ಈ ಆಳವಾದ ಕಷ್ಟದ ಸಮಯದಲ್ಲಿ ಸಾಂತ್ವನ ನೀಡಿದೆ. ನಿಮ್ಮ ಸಾಂತ್ವನ ನನ್ನ ಹೃದಯ ತಟ್ಟಿದೆ. ನಿಮ್ಮ ವಿಶ್ವಾಸಕ್ಕೆ ಆಭಾರಿ’ ಎಂದು ತಿಳಿಸಿದ್ದಾರೆ. ಸುದೀಪ್ ತಾಯಿ ಸರೋಜಾ ಸಂಜೀವ್ ಅವರು ತೀರಿಕೊಂಡ ಅ.23 ರಂದೇ ಪ್ರಧಾನಿ ನರೇಂದ್ರ ಮೋದಿ ಅವರು ಸುದೀಪ್‌ಗೆ ಈ ಪತ್ರ ಬರೆದಿದ್ದರು. ಈ ಪತ್ರವನ್ನು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಸುದೀಪ್, ಪ್ರಧಾನಿ ಅವರ ನುಡಿಗಳಿಗೆ ಧನ್ಯವಾದ ಅರ್ಪಿಸಿದ್ದಾರೆ.