ವಾರಾಣಸಿ: ಸ್ವ-ಕ್ಷೇತ್ರ ವಾರಣಾಸಿಗೆ ಇಂದು ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಶಿಕ್ಷಣ, ಆರೋಗ್ಯ, ಮೂಲಸೌಕರ್ಯ, ನಗರಾಭಿವೃದ್ಧಿ ಸೇರಿದಂತೆ ಹಲವು ಕ್ಷೇತ್ರಗಳಿಗೆ ಸಂಬಂಧಿಸಿದ ಯೂಜನೆಗಳಿಗೆ ಚಾಲನೆ ನೀಡಿದರು.
ಸುಮಾರು 2,200 ಕೋಟಿ ರೂಪಾಯಿ ಮೌಲ್ಯದ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಹಾಗೂ ಶಂಕು ಸ್ಥಾಪನೆ ನೆರವೇರಿಸಿದ್ರು. ಹಾಗೇ ಪ್ರಧಾನ ಮಂತ್ರಿ ಕಿಸಾಸ್ ಸಮ್ಮಾನ್ ನಿಧಿ ಯೋಜನೆಯ 20 ಕಂತಿನ ಹಣವನ್ನು ಬಿಡುಗಡೆ ಮಾಡಿದರು. 9.7 ಕೋಟಿ ರೈತರ ಬ್ಯಾಂಕ್ ಖಾತೆಗಳಿಗೆ 20,000 ಕೋಟಿ ರೂ.ಗಳಿಗೂ ಹೆಚ್ಚಿನ ಮೊತ್ತದ ಪಿಎಂ ಕಿಸಾನ್ ಸಮ್ಮಾನ್ ನಿಧಿಯ 20ನೇ ಕಂತಿನ ಹಣವನ್ನ ಜಮೆ ಮಾಡಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಎಸ್‌ಪಿ ಮತ್ತು ಕಾಂಗ್ರೆಸ್ ಸರ್ಕಾರಗಳು ವದಂತಿಗಳನ್ನು ಹರಡುತ್ತಿವೆ ಮತ್ತು ಜನರನ್ನು ದಾರಿ ತಪ್ಪಿಸುತ್ತಿವೆ ಎಂದು ಆರೋಪಿಸಿದರು.ನಮ್ಮ ಸರ್ಕಾರ ರೈತರ ಕಲ್ಯಾಣಕ್ಕಾಗಿ ಅವಿಶ್ರಾಂತವಾಗಿ ಕೆಲಸ ಮಾಡುತ್ತಿದೆ. ಹಿಂದಿನ ಸರ್ಕಾರಗಳು ಭರವಸೆ ನೀಡಿದ ಒಂದೇ ಒಂದು ಯೋಜನೆಯನ್ನು ಸಹ ಈಡೇರಿಸಲಿಲ್ಲ. ಬಿಜೆಪಿ ಸರ್ಕಾರ ತಾವು ಭರವಸೆ ನೀಡಿದ್ದನ್ನು ಈಡೇರಿಸಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಸರ್ಕಾರದ ಬಲವಾದ ಇಚ್ಛಾಶಕ್ತಿ ಮತ್ತು ಉದ್ದೇಶಗಳಿಗೆ ಉದಾಹರಣೆಯಾಗಿದೆ ಎಂದು ಹೇಳಿದರು.
ವಿರೋಧ ಪಕ್ಷದ ಮೇಲೆ ದಾಳಿ ಮಾಡಿದ ಅವರು, ಎಸ್‌ಪಿ ಮತ್ತು ಕಾಂಗ್ರೆಸ್‌ನಂತಹ ಅಭಿವೃದ್ಧಿ ವಿರೋಧಿ ಸರ್ಕಾರಗಳು ವದಂತಿಗಳನ್ನು ಹರಡುತ್ತವೆ ಮತ್ತು ಜನರನ್ನು ಸಾಧ್ಯವಿರುವ ಎಲ್ಲ ರೀತಿಯಲ್ಲಿ ದಾರಿ ತಪ್ಪಿಸುತ್ತವೆ ಎಂದು ಕಿಡಿಕಾರಿದ್ರು.
ಇನ್ನು ಆಪರೇಷನ್ ಸಿಂಧೂರ್ ಯಶಸ್ಸಿನ ಬಗ್ಗೆ ಮಾತನಾಡಿದ ಅವರು ಆಪರೇಷನ್ ಸಿಂಧೂರ ಯಶಸ್ಸನ್ನು ಮಹಾದೇವನಿಗೆ ಸಮರ್ಪಣೆ ಮಾಡುತ್ತೇನೆ ಎಂದು ಹೇಳಿದರು.
ನಮ್ಮ ಹೆಣ್ಣು ಮಕ್ಕಳ ಸೇಡು ತೀರಿಸಿಕೊಳ್ಳಲು ನಾವು ಮಾಡಿದ ಪ್ರತಿಜ್ಞೆ ಈಡೇರಿದೆ. ಮಹಾದೇವನ ಆಶೀರ್ವಾದದಿಂದ ಇದು ಸಾಧ್ಯವಾಗಿದೆ. ಹೀಗಾಗಿ ಆಪರೇಷನ್ ಸಿಂಧೂರದ ಯಶಸ್ಸನ್ನು ಮಹಾದೇವನಿಗೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.


