Monday, June 23, 2025
26.3 C
Bengaluru
Google search engine
LIVE
ಮನೆದೇಶ/ವಿದೇಶಶ್ರೀಲಂಕಾ ಪ್ರವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ

ಶ್ರೀಲಂಕಾ ಪ್ರವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ

ಥೈಲ್ಯಾಂಡ್ ಪ್ರವಾಸ ಮುಗಿಸಿದ ಪ್ರಧಾನಿ ನರೇಂದ್ರ ಮೋದಿ, 3 ದಿನಗಳ ಕಾಲ ಶ್ರೀಲಂಕಾ ಪ್ರವಾಸ ಕೈಗೊಂಡಿದ್ದಾರೆ. ಶ್ರುಕ್ರವಾರ ರಾತ್ರಿ 9 ಗಂಟೆಗೆ ಕೊಲಂಬೊ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೋದಿ ಅವರಿಗೆ, ಮಳೆಯ ನಡುವೆಯೂ ಶ್ರೀಲಂಕಾದ ಐವರು ಉನ್ನತ ಸಚಿವರ ತಂಡ ಸ್ವಾಗತ ಕೋರಿದ್ರು.

ಇಂದು ಅಧ್ಯಕ್ಷ ಅನುರ ಕುಮಾರ ದಿಸಾನಾಯಕೆ ಅವರು, ಸ್ವಾತಂತ್ರ್ಯ ಚೌಕದಲ್ಲಿ ಪ್ರಧಾನಿಗಳನ್ನು ಅದ್ಧೂರಿಯಾಗಿ ಬರಮಾಡಿಕೊಂಡರು. ಬಳಿಕ ಸಂಪೂರ್​ ಸೌರಶಕ್ತಿ ಯೋಜನೆಯನ್ನು ವರ್ಚುವಲ್ ಮೂಲಕ ಉದ್ಘಾಟಿಸಿದರು. ಉಭಯ ನಾಯಕರ ನಡುವೆ, ಮಹತ್ವದ ಮಾತುಕತೆಗಳು ನಡೆದಿದ್ದು, ಹಲವು ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ಪ್ರಮುಖವಾಗಿ ತ್ರಿಕೋನಮಿಯನ್ನು ಇಂಧನ ಕೇಂದ್ರವಾಗಿ ಅಭಿವೃದ್ಧಿಪಡಿಸುವ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಭಾರತ-ಶ್ರೀಲಂಕಾ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ನಿಟ್ಟಿನಲ್ಲಿ, ನಮೋ ಅವರ ಶ್ರೀಲಂಕಾ ಪ್ರವಾಸ ಪ್ರಾಮುಖ್ಯತೆ ಪಡೆದಿದೆ. ಇನ್ನು, ದ್ವೀಪ ರಾಷ್ಟ್ರ ಶ್ರೀಲಂಕಾದ ಅತ್ಯುನ್ನತ ನಾಗರೀಕ ಗೌರವವಾದ ಮಿತ್ರ ಭೂಷಣ ಪ್ರಶಸ್ತಿಯನ್ನ, ಮೋದಿ ಅವರಿಗೆ ನೀಡಿ ಗೌರವಿಸಲಾಯ್ತು. ಈ ಪ್ರಶಸ್ತಿಯನ್ನು 2008ರಲ್ಲಿ ಅಂದಿನ ಅಧ್ಯಕ್ಷ ಮಹಿಂದ ರಾಜ ಪಕ್ಸೆ ಆರಂಭಿಸಿದ್ದರು.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments