ರಾಜ್ಯಸುದ್ದಿ

ತಂಬಾಕಿಗಾಗಿ ಜೈಲರ್ ಹಾಗೂ ಮೂವರು ಸಿಬ್ಬಂದಿ ಮೇಲೆ ಕೈದಿಗಳ ಹಲ್ಲೆ

ಕಾರವಾರ: ಜೈಲಿನ ಒಳಗೆ ಮಾದಕ ವಸ್ತುಗಳನ್ನ ಬಿಡದೆ ಇರುವುದಕ್ಕೆ ಜೈಲು ಸಿಬ್ಬಂದಿ ಹಾಗೂ ಕೈದಿಗಳಗ ನಡೆವೆ ಮಾರಾಮಾರಿ ನಡೆದಿದ್ದು, ಜೈಲು ಸಿಬ್ಬಂದಿ ಮೇಲೆ ಕೈದಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ..ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ಈ ಘಟನೆ ನಡೆದಿದೆ.

ದಾಳಿ ನಡೆಸಿದವರನ್ನು ಮಂಗಳೂರು ಮೂಲದ ಮೊಹಮ್ಮದ್ ಅಬ್ದುಲ್, ಫಯಾನ್ ಹಾಗೂ ಕೌಶಿಕ್ ನಿಹಾಲ್ ಎಂದು ಗುರುತಿಸಲಾಗಿದೆ. ಜೈಲರ್ ಜೊತೆ ಮಾದಕ ವಸ್ತುಗಳ ವಿಚಾರಕ್ಕೆ ಗಲಾಟೆ ಮಾಡಿದರೂ ಒಪ್ಪದ ಹಿನ್ನೆಲೆ ಹಲ್ಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಹಲ್ಲೆಗೊಳಗಾದ ಜೈಲರ್ ಹಾಗೂ ಸಿಬ್ಬಂದಿಯನ್ನು ಕಾರವಾರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ತಿಳಿದ ಕೂಡಲೆ 20 ಕ್ಕೂ ಹೆಚ್ಚು ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಪರಿಸ್ಥಿತಿಯನ್ನು ಹಿಡಿತಕ್ಕೆ ತಂದಿದ್ದಾರೆ. ಈ ಕೈದಿಗಳು ಡಕಾಯತಿ ಸೇರಿದಂತೆ 12ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಮೊಹ್ಮದ್ ಅಬ್ದುಲ್ ಫಯಾನ್ ಮತ್ತು ಕೌಶಿಕ ನಿಹಾಲ್ ಆರೋಪಿಗಳಾಗಿದ್ದಾರೆ. ಮಂಗಳೂರು ಜೈಲಿನಲ್ಲಿ ಹೆಚ್ಚುವರಿಯಾಗಿದ್ದ ಆರೋಪಿಗಳನ್ನು ಕಾರವಾರಕ್ಕೆ ಶಿಫ್ಟ್ ಮಾಡಲಾಗಿತ್ತು. ಕಳೆದ ಕೆಲ ದಿನಗಳಿಂದ ಮಾದಕ ಪದಾರ್ಥಗಳನ್ನು ಸಂಪೂರ್ಣವಾಗಿ ಜೈಲಲ್ಲಿ ನಿರ್ಬಂಧಿಸಲಾಗಿತ್ತು ಎಂದು ತಿಳಿದುಬಂದಿದೆ.

Comments (0)

Your email address will not be published. Required fields are marked *

Back to top button