ಶಿವಮೊಗ್ಗ: ಖಾಸಗಿ ಬಸ್ ಮತ್ತು ಪೆಟ್ರೋಲ್ ಟ್ಯಾಂಕರ್ ನಡುವೆ ಡಿಕ್ಕಿಯಾಗಿ ಬಸ್ನಲ್ಲಿದ್ದ ಪ್ರಯಾಣಿಕರು ಗಾಯಗೊಂಡಿದ್ದಾರೆ.. ಜಿಲ್ಲೆಯ ರಿಪ್ಪನ್ಪೇಟೆ ಸಮೀಪದ ಕೋಡೂರು ಬಳಿ ಘಟನೆ ನಡೆದಿದೆ..
ಘಟನೆಯಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು,ತಲೆಗೆ ಪೆಟ್ಟು ಬಿದ್ದಿದ್ದರಿಂದ ಓರ್ವ ಮಹಿಳೆಯ ಸ್ಥಿತಿ ಗಂಭೀರವಾಗಿದೆ.. ಅದೃಷ್ಟವಶಾತ್ ಪ್ರಾಣಾಪಾಯದಿಂದ ಎಲ್ಲಾರು ಪಾರಾಗಿದ್ದು, ಡಿಕ್ಕಿಯ ರಭಸಕ್ಕೆ ಬಸ್ನ ಮುಂಭಾಗ ಜಖಂಗೊಂಡಿದೆ.. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆಂಬುಲೆನ್ಸ್ ಮೂಲಕ ಗಾಯಾಳುಗಳನ್ನು ತಕ್ಷಣವೇ ಹೊಸನಗರ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಯಿತು.


