Wednesday, January 28, 2026
17 C
Bengaluru
Google search engine
LIVE
ಮನೆದೇಶ/ವಿದೇಶRSS​​​ ರಾಷ್ಟ್ರಧ್ವಜಕ್ಕೆ ಅಗೌರವ ತೋರಿದ ದಾಖಲೆ ಬಿಡುಗಡೆ ಮಾಡಿದ ಪ್ರಿಯಾಂಕ್ ಖರ್ಗೆ

RSS​​​ ರಾಷ್ಟ್ರಧ್ವಜಕ್ಕೆ ಅಗೌರವ ತೋರಿದ ದಾಖಲೆ ಬಿಡುಗಡೆ ಮಾಡಿದ ಪ್ರಿಯಾಂಕ್ ಖರ್ಗೆ

​​​ಬೆಂಗಳೂರು: ಸಚಿವ ಪ್ರಿಯಾಂಕ್ಖರ್ಗೆ ಆರ್ಎಸ್ಎಸ್ರಾಷ್ಟ್ರಧ್ವಜಕ್ಕೆ ಅಗೌರವ ತೋರಿ 100 ವರ್ಷಗಳಾಗಿವೆ ಎಂದು ಆರೋಪಿಸಿದ್ದು, ಇದಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ..

ತಮ್ಮ ಎಕ್ಸ್ಖಾತೆಯಲ್ಲಿ 1948ರ ಫೆಬ್ರುವರಿ 24ರಂದು ಆರ್‌ಎಸ್‌ಎಸ್‌ ರಾಷ್ಟ್ರಧ್ವಜಕ್ಕೆ ಹೇಗೆ ಅವಮಾನಿಸಿತ್ತು ಎಂಬುದನ್ನು ತೋರಿಸುವ ಕೇಂದ್ರ ಸರ್ಕಾರದ ಗೃಹ ಸಚಿವಾಲಯವು ಪಂಜಾಬ್‌ನ ಕಾರ್ಯದರ್ಶಿಗೆ ಬರೆದ ಪತ್ರ ಇಲ್ಲಿದೆ ಎಂದು ದಾಖಲೆ ಹಂಚಿಕೊಂಡಿದ್ದಾರೆ.

ಅರೆಸ್ಸೆಸ್ ನಮ್ಮ ರಾಷ್ಟ್ರಧ್ವಜಕ್ಕೆ ಅಗೌರವ ತೋರಿ 100 ವರ್ಷ. ಸ್ವಾತಂತ್ರ್ಯ ಚಳವಳಿಗೆ ದ್ರೋಹ ಬಗೆದು 100 ವರ್ಷ. ಭಾರತದ ಸಂವಿಧಾನವನ್ನು ವಿರೋಧಿಸಿ 100 ವರ್ಷ. ರಾಷ್ಟ್ರ ವಿರೋಧಿತ್ವಕ್ಕೆ 100 ವರ್ಷಗಳು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಇತಿಹಾಸವು ಆರ್‌ಎಸ್‌ಎಸ್ ದೇಶಕ್ಕೆ ಬಗೆದ ದ್ರೋಹದ ಉದಾಹರಣೆಗಳಿಂದ ತುಂಬಿಕೊಂಡಿದೆ. ಇಡೀ ಬಿಜೆಪಿ ವ್ಯವಸ್ಥೆ ಎಷ್ಟೇ ಪ್ರಯತ್ನಿಸಿದ್ದರೂ ಆರ್‌ಎಸ್‌ಎಸ್‌ನ ಸಂವಿಧಾನ ವಿರೋಧಿ ಚರಿತ್ರೆಯನ್ನು ಎಂದಿಗೂ ಮರೆಮಾಚಲು ಸಾಧ್ಯವಿಲ್ಲ. ಬಿಜೆಪಿ ನಾಯಕರು ಹಾಗೂ ಸ್ವಯಂಸೇವಕರು ನಿಜವಾದ ಆರ್‌ಎಸ್‌ಎಸ್ ಇತಿಹಾಸವನ್ನು ತಿಳಿದುಕೊಳ್ಳುವ ಸಮಯ ಇದು ಎಂದು ಹೇಳಿದ್ದಾರೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments