ನವದೆಹಲಿ : ರಮೇಶ್ ಬಿಧುರಿ ಅವರು ಮುಂಬರುವ ಚುನಾವಣೆಯಲ್ಲಿ ಗೆದ್ದರೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಕೆನ್ನೆಯಂತೆಯೇ ತಮ್ಮ ವಿಧಾನಸಭಾ ಕ್ಷೇತ್ರದ ರಸ್ತೆಗಳನ್ನು ಸುಗಮಗೊಳಿಸುವುದಾಗಿ ಹೇಳಿದ್ದು ಭಾರೀ ವಿವಾದಕ್ಕೆ ಕಾರಣವಾಗಿದೆ. ಮುಂದಿನ ತಿಂಗಳು ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಗೆ ಮುಂಚೆ ತಮ್ಮ ಪಕ್ಷದ ಚುನಾವಣಾ ಭರವಸೆಗಳ ಬಗ್ಗೆ ಮಾತನಾಡುವಾಗ ರಮೇಶ್ ಬಿಧುರಿ ಈ ರೀತಿ ಹೇಳಿದ್ದಾರೆ.
ಓಖ್ಲಾ ಹಾಗೂ ಸಂಗಮ್ ವಿಹಾರ್ದಲ್ಲಿ ನಿರ್ಮಿಸಿರುವಂತೆ, ಕಲ್ಕಾಜಿಯಲ್ಲಿ ಪ್ರಿಯಾಂಕಾ ಗಾಂಧಿಯವರ ಕೆನ್ನೆಯಂತಹ ರಸ್ತೆಗಳನ್ನು ನಿರ್ಮಿಸುತ್ತೇನೆ ಎಂದಿದ್ದಾರೆ. ಸದ್ಯ ರಮೇಶ್ ಬಿಧುರಿ ನೀಡಿರುವ ಹೇಳಿಕೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ.
ಈ ಹಿಂದೆ ,”ಲಾಲು ಯಾದವ್ ಅವರು ಬಿಹಾರದ ರಸ್ತೆಗಳನ್ನು ಹೇಮಾ ಮಾಲಿನಿಯವರ ಕೆನ್ನೆಗಳಂತೆ ಸುಗಮಗೊಳಿಸುವುದಾಗಿ ಹೇಳಿದ್ದರು, ಆದರೆ ಅವರು ಆ ಭರವಸೆಯನ್ನು ಈಡೇರಿಸಲು ವಿಫಲರಾದರು.