ರಾಜ್ಯಸುದ್ದಿ

ಅತಿವೃಷ್ಟಿಯಿಂದ ಹಾಳಾದ ರಸ್ತೆಗಳ ಪ್ರಗತಿ ತೃಪ್ತಿಕರವಾಗಿಲ್ಲ

 ಪ್ರಗತಿ ಪರಿಶೀಲನೆ ಮಾಡಿದ ಸಚಿವ ಪ್ರಿಯಾಂಕ್‌ ಖರ್ಗೆ ಅವರಿಂದ ಆಕ್ಷೇಪ

ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ಗುರಿಯನ್ನು ಹೊಂದಿದ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಪ್ರಗತಿಪಥ ಹಾಗೂ ಕಲ್ಯಾಣಪಥ ಕಾರ್ಯಕ್ರಮಗಳು ಕೇವಲ ರಸ್ತೆ ನಿರ್ಮಾಣ ಮಾತ್ರವಲ್ಲ, ರಾಜ್ಯವನ್ನು ಪ್ರಗತಿಯತ್ತ ತೆಗೆದುಕೊಂಡು ಹೋಗುವ ಹಾಗೂ ಆರ್ಥಿಕ ಅಭಿವೃದ್ಧಿಗೆ ಪೂರಕವಾದ ಯೋಜನೆಗಳು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.

ರಾಜ್ಯದ ಎಲ್ಲ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ನಡೆಸಿದ ವಿಡಿಯೊ ಸಭೆಯಲ್ಲಿ ಮಾತನಾಡಿದ ಸಚಿವರು ಈ ಎರಡೂ ಯೋಜನೆಗಳಡಿ ಗ್ರಾಮೀಣಾಭಿವೃದ್ಧಿ ಇಲಾಖೆಯ ಎಂಜನಿಯರುಗಳು ಯೋಜನಾ ವರದಿಗಳನ್ನು ಸಿದ್ಧಪಡಿಸಿ ಈ ತಿಂಗಳ 17ರೊಳಗೆ ಮಂಜೂರಾತಿ ಕೋರಿ ಸಲ್ಲಿಸಬೇಕು ಎಂದು ಎಂಜನಿಯರ್‌ಗಳಿಗೆ ಸೂಚನೆ ನೀಡಿದರು. ಗುಣಮಟ್ಟದಲ್ಲಿ ಯಾವುದೇ ರಾಜ

Comments (0)

Your email address will not be published. Required fields are marked *

Back to top button