
ಬೆಂಗಳೂರು : ರಾಜ್ಯ ಸರಕಾರದ ವಿರುದ್ದ ಒಂದಿಲ್ಲೊಂದು ಹಗರಣಗಳ ಆರೋಪ ಮಾಡುತ್ತಿರುವ ಬಿಜೆಪಿ ವಿರುದ್ಧ ಪ್ರಬಲ’ ಅಸ್ತ್ರ ಪ್ರಯೋಗಿಸಲು ಮುಂದಾಗಿರುವ ಸರಕಾರ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧದ ಹಳೇ ಪ್ರಕರಣಕ್ಕೆ ಮರುಜೀವ ನೀಡಲು ಪ್ರಾಸಿಕ್ಯೂಷನ್ಗೆ ಪೂರ್ವಾನುಮತಿ ನೀಡಬೇಕು ಎನ್ನುವ ತೀರ್ಮಾನವನ್ನು ಸಂಪುಟ ಗುರುವಾರ ಕೈಗೊಂಡಿದೆ. ಆ ಮೂಲಕ ಬಿಜೆಪಿಯನ್ನು ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿಸುವ ಪ್ರಯತ್ನಕ್ಕೆ ಕಾಂಗ್ರೆಸ್ ಕೈಹಾಕಿದೆ. ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ನೀಡಿದ್ದ ದೂರಿನ ಆಧಾರದ ಮೇಲೆ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಲು ಮರುಪರಿಶೀಲನೆ ಮಾಡಬೇಕು ಎಂದು ರಾಜ್ಯಪಾಲರಿಗೆ ಶಿಫಾರಸು ಮಾಡುವ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಈ ತೀರ್ಮಾನದ ಬೆನ್ನಲ್ಲೇ ಯಡಿಯೂರಪ್ಪ ಮಾತ್ರವಲ್ಲದೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೂ ಸಂಕಷ್ಟ ಎದುರಾಗಿದೆ ಎನ್ನಲಾಗಿದೆ.
ಪ್ರಕರಣದ ಹಿನ್ನೆಲೆ ಏನು?: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಿಡಿಎ ಅಪಾರ್ಟ್ ಮೆಂಟ್ ನಿರ್ಮಾಣ ಟೆಂಡರ್ವೊಂದರಲ್ಲಿ ರಾಮಲಿಂಗಂ ಕನ್ನಸ್ಸಕನ್ ಕಂಪನಿಯಿಂದ 12 ಕೋಟಿ ರು. ಲಂಚ ಪಡೆದಿದ್ದರು ಎಂದು ಆರೋಪಿಸಿ ಟಿ.ಜೆ.ಅಬ್ರಹಾಂ 2020ರ ನ.19 ರಂದು ಎಸಿಬಿಗೆ ದೂರು ನೀಡಿ ಭ್ರಷ್ಟಾಚಾರ ನಿಗ್ರಹ ಕಾಯ್ದೆ, ಅಕ್ರಮ ಹಣ ವರ್ಗಾವಣೆ ຫວ 20020 5. ಸದಸ್ಯರ ವಿರುದ್ಧ ಕ್ರಮಕ್ಕೆ ಮನವಿ ಮಾಡಿದ್ದರು. ಆದರೆ, ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಲಯ, ಹಾಲಿ ಮುಖ್ಯಮಂತ್ರಿಗಳಾಗಿರುವ ಯಡಿಯೂರಪ್ಪ ವಿರುದ್ಧ ವಿಚಾರಣೆಗೆ ರಾಜ್ಯಪಾಲರು ಅನುಮತಿ ಅಗತ್ಯ ಎಂದು ಹೇಳಿತ್ತು. ಈ ಹಿನ್ನೆಲೆಯಲ್ಲಿ ಟಿ.ಜೆ.ಅಬ್ರಾಹಂ ಅವರು ರಾಜ್ಯಪಾಲರಿಗೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ಮನವಿ ಸಲ್ಲಿಸಿದ್ದರು.




