Saturday, July 5, 2025
26.3 C
Bengaluru
Google search engine
LIVE
ಮನೆ#Exclusive NewsTop Newsಹುಬ್ಬಳ್ಳಿಯ ಹೋಟೆಲ್​ನಲ್ಲಿ ವೇಶ್ಯಾವಾಟಿಕೆ ದಂಧೆ; ಮಹಿಳೆಯರ ರಕ್ಷಣೆ..!

ಹುಬ್ಬಳ್ಳಿಯ ಹೋಟೆಲ್​ನಲ್ಲಿ ವೇಶ್ಯಾವಾಟಿಕೆ ದಂಧೆ; ಮಹಿಳೆಯರ ರಕ್ಷಣೆ..!

ಹುಬ್ಬಳ್ಳಿ: ವೇಶ್ಯಾವಾಟಿಕೆ ನಡೆಯುತ್ತಿದ್ದ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಹುಬ್ಬಳ್ಳಿಯ ಹೊಸೂರು ವೃತ್ತದ ಬಳಿಯ ಪಾರಿಜಾತ​​ ಲಾಡ್ಜ್​ ಮೇಲೆ ದಾಳಿ ಮಾಡಿ ಅಂತರಾಜ್ಯದ ಐವರು ಮಹಿಳೆಯರು ಹಾಗೂ 5 ಮಂದಿ ಪುರುಷರನ್ನು ಬಂಧಿಸಿದ್ದಾರೆ.

ಮೈಸೂರಿನ ಒಡನಾಡಿ ಸಂಸ್ಥೆಯ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ಲಾಡ್ಜ್​ನಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದವರನ್ನು ರೆಡ್​​ ಹ್ಯಾಂಡ್​ ಆಗಿ ಹಿಡಿದಿದ್ಧಾರೆ. ದಾಳಿ ವೇಳೆ ಕಲ್ಕತ್ತಾದ  ಇಬ್ಬರು, ಬೆಂಗಳೂರಿನ ಓಬ್ಬಳು ಹಾಗೂ ದಾವಣಗೆರೆಯ ಇಬ್ಬರು ಹೆಣ್ಣು ಮಕ್ಕಳ ರಕ್ಷಣೆ ಮಾಡಲಾಗಿದೆ.

ಇನ್ನು ಪೊಲೀಸರ ದಾಳಿ ವೇಳೆ ಶೌಚಾಲಯದಲ್ಲಿ ಗುಪ್ತ ಕೊಠಡಿ ಪತ್ತೆಯಾಗಿದೆ. ಆಕಸ್ಮಿಕವಾಗಿ ಲಾಡ್ಜ್​​ ಮೇಲೆ ಯಾರಾದರೂ ದಾಳಿ ಮಾಡಿದ್ರೆ ಅಡಗಿಕೊಳ್ಳುವ ಸಲುವಾಗಿ ನಿರ್ಮಾಣ ಮಾಡಲಾಗಿದೆ. ಇನ್ನು ಸ್ಥಳಕ್ಕೆ ಹುಬ್ಬಳ್ಳಿ-ಧಾರವಾಡ ಕಮಿಷನರ್​​ ಎನ್​. ಶಶಿಕುಮಾರ್​ ಭೇಟಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ವಿದ್ಯಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುವುದು ಎಂದು ಕಮಿಷನರ್​  ಎನ್​. ಶಶಿಕುಮಾರ್​ ಹೇಳಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments