ರಾಜ್ಯ

ವಿವಿ ಮುಚ್ಚುವ ಸರ್ಕಾರದ ನಿರ್ಧಾರ ಖಂಡಿಸಿ ನಾಳೆ ರಾಜ್ಯಾದ್ಯಂತ ಪ್ರತಿಭಟನೆ

ಹುಬ್ಬಳ್ಳಿ:  ರಾಜ್ಯದಲ್ಲಿರುವ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಫೆ. 17 ರಂದು ABVP ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ.

ವಿಶ್ವವಿದ್ಯಾಲಯಗಳು ವಿದ್ಯಾರ್ಜನೆಯ ಕೇಂದ್ರವಾಗಿವೆ. ಅಲ್ಲಿ ಕಲಿತು ಮುಂದೆ ವಿದ್ಯಾರ್ಥಿಗಳು ದೇಶದ ಅಭಿವೃದ್ದಿಗೆ ಪೂರಕವಾಗಿ ಕಾರ್ಯನಿರ್ವಹಿಸುವ ವ್ಯಕ್ತಿಗಳಾಗುತ್ತಾರೆ. ಅಂತಹ ವಿಶ್ವವಿದ್ಯಾಲಯಗಳಿಗೆ ಮೂಲಭೂತ ಸೌಲಭ್ಯಗಳನ್ನು ನೀಡುವುದು ಸರ್ಕಾರದ ಆದ್ಯ ಕರ್ತವ್ಯ. ಆದರೆ ಕರ್ನಾಟಕ ರಾಜ್ಯದಲ್ಲಿ ಹಿಂದಿನ ಸರ್ಕಾರ ಘೋಷಣೆ ಮಾಡಿದ್ದ 9 ಹೊಸ ವಿಶ್ವವಿದ್ಯಾಲಯಗಳನ್ನು ಈಗಿನ ರಾಜ್ಯ ಸರ್ಕಾರ ಮುಚ್ಚಲು ಹೊರಟಿರುವದನ್ನು ABVP ಖಂಡಿಸುತ್ತದೆ .

ಕರ್ನಾಟಕ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಅವರ ನೇತೃತ್ವದ ಸಚಿವ ಸಂಪುಟದ ಉಪಸಮಿತಿಯು ಆರ್ಥಿಕ ಹಾಗೂ ಮೂಲಭೂತ ಸೌಲಭ್ಯಗಳ ನೆಪವನ್ನು ಹೇಳಿ ವಿಶ್ವವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವುದು ಶಿಕ್ಷಣ ವಿರೋಧಿ ನೀತಿಯಾಗಿದೆ. ಸರ್ಕಾರಗಳು ವಿಶ್ವವಿದ್ಯಾಲಯಗಳ ಸ್ಥಾಪನೆ ಹಾಗೂ ಮುಚ್ಚುವ ಮನಸೋ ಇಚ್ಛೆ ಕಾರ್ಯದಿಂದ ವಿಶ್ವವಿದ್ಯಾಲಯಗಳ ಮೇಲೆ ಮತ್ತು ಶೈಕ್ಷಣಿಕ ಕ್ಷೇತ್ರದ ಮೇಲೆ ಇರುವ ವಿಶ್ವಾಸಾರ್ಹತೆ ಕಡಿಮೆಯಾಗುತ್ತದೆ. ವಿಶ್ವವಿದ್ಯಾಲಯಗಳ ಕುರಿತು ಯಾವುದೇ ನಿರ್ಣಯಗಳನ್ನು ತೆಗೆದುಕೊಳ್ಳಬೇಕಾದರೆ ಶಿಕ್ಷಣ ತಜ್ಞರ ಸಲಹೆಗಳನ್ನು ತೆಗೆದುಕೊಳ್ಳಬೇಕೆ ಹೊರತು ರಾಜಕೀಯ ಕೇಂದ್ರಿತ ನಿರ್ಧಾರಗಳು ಆಗಬಾರದು ಎಂಬುದು ಎಬಿವಿಪಿಯ ಆಶಯಾಗಿದೆ ಎಂದು ಎಬಿವಿಪಿ ಉತ್ತರ ಕರ್ನಾಟಕ ರಾಜ್ಯ ಕಾರ್ಯದರ್ಶಿ ಸಚಿನ ಕುಳಗೇರಿ ಅವರು ಹೇಳಿದ್ದಾರೆ.

Comments (0)

Your email address will not be published. Required fields are marked *

Back to top button