ಬೆಂಗಳೂರು: ನಮ್ಮ ಮೆಟ್ರೋ ದರ ಏರಿಕೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನಲೇ ಇಂದು ಬೆಳಿಗ್ಗೆ ಎಬಿವಿಪಿ ದರ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸಿತು.
ಅನುಮತಿ ಪಡೆಯದೇ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದ್ದಕ್ಕಾಗಿ 16 ಕಾರ್ಯಕರ್ತರ ವಿರುದ್ದ ಕಾಟನಪೇಟೆ ಪೋಲಿಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಕೆಲ ದಿನಗಳ ಹಿಂದೆ ಬಿಎಂಆರ್ ಸಿಎಲ್ ಪ್ರಯಾಣ ದರ ಏರಿಕೆ ಮಾಡಿ ಆದೇಶ ಹೊರಡಿಸಿತ್ತು. ಬಳಿಕ ಪ್ರಯಾಣಿಕರಿಂದ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಟಿಕೆಟ್ ದರದಲ್ಲಿ ಕೊಂಚ ಇಳಿಕೆ ಮಾಡಿತ್ತು.