ಜಿಲ್ಲೆ

ಡಿಸಿಎಂ ಡಿಕೆಶಿ ಹೇಳಿಕೆ ಖಂಡಿಸಿ ಪ್ರೊಟೆಸ್ಟ್

ಕಲಬುರಗಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸಂವಿಧಾನ ಬದಲಾವಣೆಯ ಹೇಳಿಕೆ ಖಂಡಿಸಿ ಕಲಬುರಗಿಯಲ್ಲಿ ಬಿಜೆಪಿ ನಾಯಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.

ಜಿಲ್ಲಾ ಬಿಜೆಪಿ ಘಟಕದಿಂದ ನಗರದ ಸರ್ದಾರ್ ವಲಭಬಾಯಿ ಸರ್ಕಲ್​ನಲ್ಲಿ ಡಿಸಿಎಂ ಡಿಕೆಶಿ ಅವರ ಪ್ರತಿಕೃತಿ ದಹಿಸಿ, ಟಾಯರ್​ಗೆ ಬೆಂಕಿ ಹಚ್ಚಿ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ.ನಮೋಶಿ, ಕಾಂಗ್ರೆಸ್ ಅವರು ಸಂವಿಧಾನ ರಕ್ಷಣೆ ಮಾಡುವುದಾಗಿ ಹೇಳಿ ಸಂವಿಧಾನಕ್ಕೆ, ಡಾ. ಅಂಬೇಡ್ಕರ್ ಅವರಿಗೆ ಅಪಮಾನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಭಾರತದ ಪ್ರಜಾತಂತ್ರ ವ್ಯವಸ್ಥೆಯ ಸಾರ್ವಭೌಮ ಎಂದು ಗೌರವಿಸುವ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವನ್ನೇ ತಿದ್ದುಪಡಿ ಮಾಡಿದರೂ ಸರಿ ಮುಸ್ಲಿಮರಿಗೆ ಮೀಸಲಾತಿ ನೀಡುವುದೇ ನಮ್ಮ ಪ್ರಥಮ ಆದ್ಯತೆ, ದೇಶ, ಸಂವಿಧಾನಕ್ಕಿಂತ ಮುಸ್ಲಿಮರಿಗೆ ಮೀಸಲಾತಿ ಕೊಡುವುದು ನಮ್ಮ ಕರ್ತವ್ಯ ಎಂಬ ಅರ್ಥದಲ್ಲಿ ಡಿಕೆ ಶಿವಕುಮಾರ್ ಕಾಂಗ್ರೆಸ್‌ನ ಮುಖ್ಯ ಅಜೆಂಡಾ ಏನು ಎಂಬುದನ್ನು ಬಹಿರಂಗಪಡಿಸಿದ್ದಾರೆ ಎಂದರು.

ಪ್ರತಿಭಟನೆಯಲ್ಲಿ ಶಾಸಕ ಬಸವರಾಜ್ ಮತ್ತಿಮಡುಮ ಮಾಜಿ ಸಂಸದ ಡಾ. ಅವಿನಾಶ ಜಾಧವ್, ಮಾಜಿ ಶಾಸಕ ಸುಭಾಷ್ ಗುತ್ತೇದಾರ್, ಜಿಲ್ಲಾಧ್ಯಕ್ಷ ಅಶೋಕ್ ಬಗಲಿ ಉಪಸ್ಥಿತರಿದ್ದರು.

Comments (0)

Your email address will not be published. Required fields are marked *

Back to top button