
ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ನಡೆದಿದ್ದ ಬೃಹತ್ ಪ್ರತಿಭಟನೆ ಕೊನೆಗೂ ಅಂತ್ಯಗೊಂಡಿದೆ. ವಿದ್ಯಾರ್ಥಿಗಳ ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಕೇಂದ್ರ ಸರ್ಕಾರ ಸಮ್ಮತಿಸಿದ ಹಿನ್ನೆಲೆಯಲ್ಲಿ, ಸಿಜೆಪಿ ಮತ್ತು ಬಿಜೆಪಿ ಜಂಟಿ ಸುದ್ದಿಗೋಷ್ಠಿ ನಡೆಸಿ ಹೋರಾಟವನ್ನು ವಾಪಸ್ ಪಡೆಯುತ್ತಿರುವುದಾಗಿ ಘೋಷಿಸಿವೆ.
ಕಳೆದ 37 ದಿನಗಳಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ ದೆಹಲಿಯ ಜಂತರ್ ಮಂತರ್‌ನಲ್ಲಿ ನಿರಂತರ ಪ್ರತಿಭಟನೆ ನಡೆಸುತ್ತಿತ್ತು. ಕೇಂದ್ರ ಸಚಿವರ ಸಂಧಾನ ಯಶಸ್ವಿಯಾದ ಹಿನ್ನೆಲೆಯಲ್ಲಿ, ಪ್ರತಿಭಟನಾ ನಿರತರು ತಮ್ಮ ಹೋರಾಟವನ್ನು ಅಧಿಕೃತವಾಗಿ ಕೈಬಿಟ್ಟಿದ್ದಾರೆ.
ಪ್ರತಿಭಟನೆ ಹಿಂಪಡೆಯುತ್ತೇವೆ ಎಂದು ಕಾಕ್ರೋಚ್ ಪಾರ್ಟಿ ದೆಹಲಿಯಲ್ಲಿ ಸಿಜೆಪಿ ವಕ್ತಾರ ಸೌರವ್ ದಾಸ್ ಘೋಷಣೆ ಮಾಡಿದ್ದಾರೆ. ದೇಶಾದ್ಯಂತ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ದಾಖಲಾಗಿರುವ ಎಲ್ಲಾ ಪ್ರಮುಖ ಪ್ರಕರಣಗಳನ್ನು (FIR) ಹಿಂಪಡೆಯಲು ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ.
ಭವಿಷ್ಯದಲ್ಲಿ ವಿದ್ಯಾರ್ಥಿಗಳ ವಿರುದ್ಧ ಯಾವುದೇ ರೀತಿಯ ಕಾನೂನು ಕ್ರಮ ಜರುಗಿಸುವುದಿಲ್ಲ ಎಂದು ಭರವಸೆ ನೀಡಲಾಗಿದೆ.




