Sunday, December 7, 2025
25 C
Bengaluru
Google search engine
LIVE
ಮನೆ#Exclusive NewsTop Newsಲಡಾಖ್‌ಗೆ ರಾಜ್ಯ ಸ್ಥಾನಮಾನ ನೀಡಲು ಒತ್ತಾಯಿಸಿ ಪ್ರತಿಭಟನೆ

ಲಡಾಖ್‌ಗೆ ರಾಜ್ಯ ಸ್ಥಾನಮಾನ ನೀಡಲು ಒತ್ತಾಯಿಸಿ ಪ್ರತಿಭಟನೆ

ಲಡಾಖ್​​: ಲಡಾಖ್​​​​​ ಗೆ ರಾಜ್ಯ ಸ್ಥಾನಮಾನ ನೀಡುವಂತೆ ಒತ್ತಾಯಿಸಿ ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.. ಈ ಆಂದೋಲದ ನೇತೃತ್ವವನ್ನು ಸೋನಮ್ ವಾಂಗ್‌ಚುಕ್ ವಹಿಸಿದ್ದಾರೆ. ಸೋನಮ್ ವಾಂಗ್‌ಚುಕ್ ಅವರನ್ನು ಬೆಂಬಲಿಸಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಮತ್ತು ಯುವಕರು ಬೀದಿಗಿಳಿದಿದ್ದಾರೆ. ಅವರು ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಿದ್ದಾರೆ ಮತ್ತು ಸಿಆರ್‌ಪಿಎಫ್ ವಾಹನಗಳನ್ನು ಸುಟ್ಟುಹಾಕಿದ್ದಾರೆ.

ಕೈಗಾರಿಕೋದ್ಯಮಿಗಳು ಈ ಹಿಮಾಲಯ ಪ್ರದೇಶದ ನೈಸರ್ಗಿಕ ಸಂಪನ್ಮೂಲಗಳ ಮೇಲೆ ಕಣ್ಣಿಟ್ಟಿದ್ದಾರೆ. ಕೇಂದ್ರಾಡಳಿತ ಪ್ರದೇಶವಾಗಿ ಉಳಿಯುವುದು ಶೋಷಣೆಗೆ ಕಾರಣವಾಗುತ್ತದೆ. ಇದನ್ನು ತಡೆಯುವ ಏಕೈಕ ಮಾರ್ಗವೆಂದರೆ ಅದಕ್ಕೆ ಬುಡಕಟ್ಟು ಸ್ಥಾನಮಾನ ನೀಡುವುದು ಎಂದು ವಾಂಗ್​ಚುಕ್ ಮೊದಲೇ ಹೇಳಿದ್ದರು.

ಆಗಸ್ಟ್​ 5, 2019ರಂದು ಜಮ್ಮು ಮತ್ತು ಕಾಶ್ಮೀರದಿಂದ 370 ನೇ ವಿಧಿಯನ್ನು ರದ್ದುಗೊಳಿಸಲಾಯಿತು. ನಂತರ ಇದನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಲಾಯಿತು. ಹೀಹಾಗಿ ಲಡಾಖ್‌ಗೆ ರಾಜ್ಯ ಸ್ಥಾನಮಾನ ನೀಡುವಂತೆ ಒತ್ತಾಯಿಸಿ ಪ್ರತಿಭಟನೆಗಳು ನಡೆಯುತ್ತಿವೆ .

ಲಡಾಖ್​ ಗೆ ಪೂರ್ಣ ರಾಜ್ಯ ಸ್ಥಾನಮಾನ, ಬುಡಕಟ್ಟು ಸ್ಥಾನಮಾನ, ಸರ್ಕಾರಿ ಉದ್ಯೋಗಗಳಲ್ಲಿ ಸ್ಥಳೀಯ ನಿವಾಸಿಗಳಿಗೆ ಮೀಸಲಾತಿ ಮತ್ತು ಲೇಹ್ ಮತ್ತು ಕಾರ್ಗಿಲ್‌ಗೆ ಪ್ರತ್ಯೇಕ ಲೋಕಸಭಾ ಸ್ಥಾನಗಳು ಇವುಗಳು ಸೇರಿವೆ. ಅಲ್ಲಿನ ಜನರು ಹೆಚ್ಚಿನ ಅವಕಾಶಗಳನ್ನು ಬಯಸುತ್ತಾರೆ. ಅದಕ್ಕಾಗಿಯೇ ಅವರು ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ಮತ್ತು ಸ್ಥಳೀಯ ಜನಸಂಖ್ಯೆಗೆ ಬುಡಕಟ್ಟು ಸ್ಥಾನಮಾನವನ್ನು ಒತ್ತಾಯಿಸುತ್ತಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments