ಚಾಮರಾಜನಗರ: ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ಅನುಮತಿ ನಿರಾಕರಿಸಿರುವ ಅಸ್ಸಾಂ ಸರ್ಕಾರ ಹಾಹು ಪಾದ ಯಾತ್ರೆ ವೇಳೆ ಹಲ್ಲೆ ನಡೆಸಿರುವ ಕಿಡಿಗೇಡಿಗಳ ಕೃತ್ಯವನ್ನು ಖಂಡಿಸಿ ಗಡಿಜಿಲ್ಲೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನಾ ಧರಣಿ ನಡೆಸಿದರು.
ಚಾಮರಾಜನಗರದ ಚಾಮರಾಜೇಶ್ವರ ದೇವಸ್ಥಾನದ ಬಳಿ ಸ್ಥಳೀಯ ಶಾಸಕ ಸಿ.ಪುಟ್ಟರಂಗಶೆಟ್ಟಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ, ಅಸ್ಸಾಂ ಸರ್ಕಾರ ಕೇಂದ್ರ ಸರ್ಕಾರದ ಕೈಗೊಂಬೆಯಾಗಿದೆ, ಅಸ್ಸಾಂ ಸಂಸದರು ಗೂಂಡಾಗಿರಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಜನರನ್ನು ಒಗ್ಗೂಡಿಸುವ, ಜನರಿಗೆ ನ್ಯಾಯ ಕೊಡಿಸುವ ಸಲುವಾಗಿ ಪಾದಯಾತ್ರೆ ಹಮ್ಮಿಕೊಂಡಿದ್ದರು, ಆದರೆ ರಾಹುಲ್ ಗಾಂಧಿಯವರಿಗೆ ಪಾದಯಾತ್ರೆ ಮಾಡಲು ಅನುಮತಿ ನಿರಾಕರಿಸಿರುವ ಅಸ್ಸಾಂ ಮುಖ್ಯಮಂತ್ರಿ ಹಾಗು ಸರ್ಕಾರದ ಭಾಗವಾಗಿರುವ ಗೂಂಡಾಗಳು ನಮ್ಮ ನಾಯಕರ ಮೇಲೆ ಹಲ್ಲೆಗೆ ಮುಂದಾಗಿದ್ದು ಖಂಡನೀಯ ಎಂದು ಆಕ್ರೋಶ ಹೊರಹಾಕಿದರು.