Tuesday, January 27, 2026
26.7 C
Bengaluru
Google search engine
LIVE
ಮನೆಜಿಲ್ಲೆಯತ್ನಾಳ್ ಉಚ್ಚಾಟನೆ ಖಂಡಿಸಿ ಮುಂದುವರೆದ ಪ್ರೊಟೆಸ್ಟ್

ಯತ್ನಾಳ್ ಉಚ್ಚಾಟನೆ ಖಂಡಿಸಿ ಮುಂದುವರೆದ ಪ್ರೊಟೆಸ್ಟ್

ವಿಜಯಪುರ:  ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಿದ್ದನ್ನು ಖಂಡಿಸಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ರೋಣ ಹಾಗೂ ಗಜೇಂದ್ರಗಡ ತಾಲೂಕಾ ಘಟಕದಿಂದ ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಪ್ರತಿಭಟನೆಯನ್ನ ನಡೆಸಲಾಯಿತು.

ಇದೇ ವೇಳೆ ಮಾತನಾಡಿದ ಪ್ರತಿಭಟನಾಕಾರರು ಯತ್ನಾಳ್ ಒಂದು ಸಮಾಜಕ್ಕೆ ಸೀಮಿತವಾದವರಲ್ಲ ಇಡೀ ಹಿಂದೂ ಸಮಾಜಕ್ಕೆ ಬೇಕಾದವರು. ಪಂಚಮಸಾಲಿ 2A ಮೀಸಲಾತಿಗಾಗಿ ನಿರಂತರವಾಗಿ ಹೋರಾಟ ಮಾಡಿದ್ದಾರೆ. ಯತ್ನಾಳ್ ಇಲ್ಲ ಅಂದ್ರೆ ಬಿಜೆಪಿಯಲ್ಲಿ ಏನೂ ಇಲ್ಲ. ಹಿಂದೂ ಪರವಾಗಿ ಮಾತನಾಡೋರನ್ನ ಬಿಜೆಪಿಯಲ್ಲಿ ಮೂಲೆಗುಂಪು ಮಾಡಲು ಹೊರಟಿದ್ದೀರಿ ಅಂತಾ ಆಕ್ರೋಶ ಹೊರ ಹಾಕಿದ್ರು. ಬಿ ಎಸ್ ಯಡಿಯೂರಪ್ಪ ಹಾಗೂ ವಿಜಯೇಂದ್ರ ವಿರುದ್ಧ ಕಿಡಿಕಾರಿದ ಪ್ರತಿಭಟನಾಕಾರರು ಕೂಡಲೇ ಯತ್ನಾಳ್ ಉಚ್ಚಾಟನೆ ಹಿಂಪಡೆಯಬೇಕೆಂದು ಆಗ್ರಹಿಸಿದ್ರು. ಪ್ರತಿಭಟನೆಯಲ್ಲಿ ಪಂಚಮಸಾಲಿ ಮುಖಂಡರು ಸೇರಿದಂತೆ ಹಲವರು ಭಾಗಿಯಾಗಿದ್ದರು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments