ಜಿಲ್ಲೆರಾಜ್ಯಸುದ್ದಿ

ಸಿಲಿಕಾನ್ ಸಿಟಿಯಲ್ಲಿಂದು ಪ್ರತಿಭಟನೆ ಬಿಸಿ; ಟ್ರಾಫಿಕ್ ಜಾಮ್ ಭೀತಿ..!

ಕೇಂದ್ರ ಸರ್ಕಾರದ ಕೃಷಿ ಮತ್ತು ಆರ್ಥಿಕ ನೀತಿಗಳನ್ನು ವಿರೋಧಿಸಿ ಅಖಿಲ ಭಾರತ ಕಾರ್ಮಿಕ ಸಂಘಟನೆಗಳ ಒಕ್ಕೂಟವು ಇಂದು ಭಾರತ್ ಬಂದ್‌ಗೆ ಕರೆ ನೀಡಿದೆ. CITU, AITUC, INTUC ಸೇರಿದಂತೆ ಸುಮಾರು 10 ಪ್ರಮುಖ ಕಾರ್ಮಿಕ ಸಂಘಟನೆಗಳು ಈ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದು, ರೈತ ಸಂಘಟನೆಗಳು ಮತ್ತು ಸರ್ಕಾರಿ ನೌಕರರ ಸಂಘಗಳು ಕೂಡ ಬೆಂಬಲ ಸೂಚಿಸಿವೆ.

ಕರ್ನಾಟಕದಲ್ಲಿ ಸರ್ಕಾರವು ಯಾವುದೇ ಅಧಿಕೃತ ರಜೆ ಘೋಷಿಸಿಲ್ಲದಿದ್ದರೂ, ರಾಜಧಾನಿ ಬೆಂಗಳೂರಿನಲ್ಲಿ ಪ್ರತಿಭಟನೆಯ ಬಿಸಿ ತಟ್ಟುವ ಸಾಧ್ಯತೆ ಹೆಚ್ಚಿದೆ.ಬೆಂಗಳೂರಿನ ಟೌನ್ ಹಾಲ್ ಬಳಿ ಇಂದು ಬೆಳಿಗ್ಗೆ 11 ಗಂಟೆಗೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಪೊಲೀಸ್ ಇಲಾಖೆಯು ಈ ಪ್ರತಿಭಟನೆಗೆ ಅಧಿಕೃತ ಅನುಮತಿ ನೀಡಿಲ್ಲದಿದ್ದರೂ, ಕಾರ್ಮಿಕ ಸಂಘಟನೆಗಳು ಮುಷ್ಕರ ನಡೆಸಲು ನಿರ್ಧರಿಸಿವೆ. ನಗರದ ಕೇಂದ್ರ ಭಾಗದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಪ್ರತಿಭಟನಾಕಾರರು ಸೇರುವುದರಿಂದ ಟೌನ್ ಹಾಲ್ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಚಾರ ವ್ಯತ್ಯಯ ಉಂಟಾಗುವ ಸಾಧ್ಯತೆಯಿದ್ದು, ವಾಹನ ಸವಾರರು ಟ್ರಾಫಿಕ್ ಜಾಮ್ ಸಮಸ್ಯೆ ಎದುರಿಸಬೇಕಾಗಬಹುದು.

Comments (0)

Your email address will not be published. Required fields are marked *

Back to top button