ನಟಿ ರಶ್ಮಿಕಾ ಮಂದಣ್ಣಗೆ ಭದ್ರತೆ ನೀಡಬೇಕೆಂದು ಕೊಡವ ನ್ಯಾಷನಲ್ ಸಂಘಟನೆ ಅಧ್ಯಕ್ಷ ನಂದಿನೆರವಂಡ ನಾಚಪ್ಪ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಈ ಹಿಂದೆ ಶಾಸಕ ರವಿಕುಮಾರ್ ಗಣಿಗ ರಶ್ಮಿಕಾ ವಿರುದ್ಧ ಧ್ವನಿ ಎತ್ತಿದ್ದರು. ಈ ಹೇಳಿಕೆ ಬಳಿಕ ನಂದಿನೆರವಂಡ ನಾಚಪ್ಪ ರಶ್ಮಿಕಾಗೆ ಭದ್ರತೆ ಆಗ್ರಹಿಸಿ ಪತ್ರ ಬರೆದಿದ್ದಾರೆ. ಜಾತಿ ವಿಚಾರಕ್ಕೆ ಅವರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.


