ಕ್ರೈಂ ಸ್ಟೋರಿ

ಪ್ರಚೋದನಾತ್ಮಕ ಭಾಷಣ; ಶಾಸಕ ಯತ್ನಾಳ್ ವಿರುದ್ಧ FIR

ವಿಜಯಪುರ: ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್​ಐಆರ್​​ ದಾಖಲಾಗಿದೆ. ಇತ್ತಿಚಿಗೆ ಹುಬ್ಬಳ್ಳಿಯ ಬಾಣಿ ಓಣಿಯಲ್ಲಿ ನಡೆದ ರಾಮನವಮಿ ಕಾರ್ಯಕ್ರಮದಲ್ಲಿ ಪ್ರವಾದಿ ಮುಹಮ್ಮದ್ ಅವರ ಕುರಿತು ವಿವಾದಾತ್ಮಕ ಹೇಳಿಕೆ ನೀಡದ್ದರು ಎಂದು ಹೇಳಲಾಗಿದೆ.

ಏಪ್ರಿಲ್ 7ರಂದು ಹುಬ್ಬಳ್ಳಿಯ ಬಾನಿ ಓಣಿಯಲ್ಲಿ ನಡೆದ ರಾಮನವಮಿ ಕಾರ್ಯಕ್ರಮದಲ್ಲಿ ಇಸ್ಲಾಂ ಧರ್ಮ ಮತ್ತು ಪ್ರವಾದಿ ಮಹಮ್ಮದ್ ಅವರ ಬಗ್ಗೆ ಶಾಸಕ ಯತ್ನಾಳ್ ಪ್ರಚೋದನಕಾರಿ ಹಾಗೂ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಮೊಹಮ್ಮದ್ ಹನ್ನಾನ್ ಶೇಖ್ ಎಂಬುವರು ಈ ದೂರು ದಾಖಲಿಸಿದ್ದಾರೆ. ಮುಸ್ಲಿಂ ಸಮುದಾಯದ ಧಾರ್ಮಿಕ ಭಾವನೆಗಳಿಗೆ ತೀವ್ರ ಆಘಾತ ಉಂಟುಮಾಡುವ ಹೇಳಿಕೆಯಿಂದ ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ಭಂಗ ಉಂಟಾಗುವ ಸಾಧ್ಯತೆ ಇದೆ ಎಂದು ದೂರುದಾರರು ತಿಳಿಸಿದ್ದಾರೆ.

Comments (0)

Your email address will not be published. Required fields are marked *

Back to top button