ದಾವಣಗೆರೆ: ಲೋಕಸಭೆಯಲ್ಲಿ ಮಂಡಿಸಿದ ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ಮಹಾನಗರ ಪಾಲಿಕೆ 4ನೇ ವಾರ್ಡ್‌ನ ಸದಸ್ಯ ಅಹಮ್ಮದ್ ಕಬೀರ್ ಖಾನ್ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾತ್ಮಕವಾಗಿ ಹೇಳಿಕೆಯನ್ನು ವಿಡಿಯೋ ಮೂಲಕ ವೈರಲ್ ಆಗಿತ್ತು. ಮಹಮ್ಮದ್ ಕಬೀರ್ ಖಾನ್ ಮತ್ತು ಇತರರ ವಿರುದ್ಧ ದೂರು ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಎಚ್ಚರಿಕೆ: ವಾಟ್ಸ್ಆಪ್, ಫೇಸ್‌ಬುಕ್, ಇನ್ಸ್‌ಸ್ಟಾಗ್ರಾಂ, ಟ್ವಿಟ್ಟರ್ ಹಾಗೂ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ರೀತಿಯ ಪ್ರಚೋದನಕಾರಿ, ವ್ಯಕ್ತಿ ನಿಂದನೆ, ಧಾರ್ಮಿಕ ನಿಂದನೆ, ದ್ವೇಷ ಭಾಷಣ, ದೇಶ ವಿರೋಧಿ ಪೋಸ್ಟ್‌ಗಳನ್ನು ಹಾಕುವವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.