Thursday, September 11, 2025
23.5 C
Bengaluru
Google search engine
LIVE
ಮನೆUncategorizedPSI-545 ಹುದ್ದೆಗಳಿಗೆ ಇಂದು ಮರು ಪರೀಕ್ಷೆ

PSI-545 ಹುದ್ದೆಗಳಿಗೆ ಇಂದು ಮರು ಪರೀಕ್ಷೆ

ಬೆಂಗಳೂರು: ಪಿಎಸ್​ಐ 545 ಹುದ್ದೆಗಳಿಗೆ ಇವತ್ತು ಮರು ಪರೀಕ್ಷೆ ನಡೆಯಲಿದ್ದು,ಪರೀಕ್ಷಾ ಕೇಂದ್ರದ 100 ಮೀಟರ್​ನಲ್ಲಿ 144 ಸೆಕ್ಸನ್ ಜಾರಿ ಮಾಡಲಾಗಿದೆ. ಹಿಂದೆ ನಡೆದ ಪರೀಕ್ಷೆಯಲ್ಲಿ ಭಾರೀ ಅಕ್ರಮಗಳು ನಡೆದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ನಿಗಾ ಇಟ್ಟಿದೆ.ಒಟ್ಟು 54 ಸಾವಿರ ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಬೆಂಗಳೂರಿನ 117 ಕೇಂದ್ರಗಳಲ್ಲಿ ಬಿಗಿಭದ್ರತೆ ಒದಗಿಸಲಾಗಿದೆ. ಬೆಳಗ್ಗೆ 10.30ರಿಂದ ಮಧ್ಯಾಹ್ನ 12ರವರೆಗೆ ಹಾಗೂ ಮಧ್ಯಾಹ್ನ 1 ಗಂಟೆಯಿಂದ 2.30 ರವರೆಗೆ ಪರೀಕ್ಷೆ ನಡೆಯಲಿದೆ.

117 ಕೇಂದ್ರಗಳಲ್ಲಿ ಬಿಗಿಭದ್ರತೆ

ಪ್ರತಿ ಪರೀಕ್ಷಾ ಕೇಂದ್ರದಲ್ಲೂ ನಾಲ್ವರು ಸಶಸ್ತ್ರ ಪೇದೆಗಳ ನಿಯೋಜನೆ
ಇಬ್ಬರು ಮಹಿಳಾ ಸಿಬ್ಬಂದಿ ಸೇರಿ 6 ಮಂದಿ ಭದ್ರತೆಗಾಗಿ ನಿಯೋಜನೆ
ಪರೀಕ್ಷಾ ಕೇಂದ್ರಗಳ ಸುತ್ತ ಓಡಾಡುವವರ ಮೇಲೆ ತೀವ್ರ ನಿಗಾ
ಗಾಳಿಸುದ್ದಿ ಹಬ್ಬಿಸುವವರು, ಜೆರಾಕ್ಸ್ ಅಂಗಡಿಗಳ ಮೇಲೆ ಕಣ್ಣು
ಅಭ್ಯರ್ಥಿಯನ್ನು ಲೋಹಶೋಧಕ ಯಂತ್ರದ ಮೂಲಕ ತಪಾಸಣೆ

ಪರೀಕ್ಷಾ ಅಭ್ಯರ್ಥಿಗಳಿಗೆ ಏನೆಲ್ಲ ಗೈಡ್​ಲೈನ್ಸ್ ಇದೆ?

ಅಭ್ಯರ್ಥಿಗಳು ವಸ್ತ್ರ ಸಂಹಿತೆ ಸೂಚನೆಗಳನ್ನು ಪಾಲಿಸುವುದು ಕಡ್ಡಾಯವಾಗಿದೆ. ಮೊಬೈಲ್ ಸೇರಿ, ಎಲೆಕ್ಟ್ರಾನಿಕ್ ವಸ್ತುಗಳ ತರಲು ಅವಕಾಶ ಇಲ್ಲ. ಶರ್ಟ್, ಪ್ಯಾಂಟ್​ಗಳಿಗೆ ಜಿಪ್ ಪ್ಯಾಕೆಟ್ಸ್​, ದೊಡ್ಡ ದೊಡ್ಡ ಗುಂಡಿಗಳು ಹಾಗೂ ಹೆಚ್ಚಿನ ಡಿಸೈನ್​ಗಳು ಬಟ್ಟೆಯಲ್ಲಿ ಇರುವಂತಿಲ್ಲ. ಅಭ್ಯರ್ಥಿಗಳು ಪರೀಕ್ಷಾ ಹಾಲ್​ಗೆ ಶೂ ಹಾಕಿಕೊಂಡು ಹೋಗುವಂತಿಲ್ಲ. ಸ್ಯಾಂಡಲ್ ಅಥವಾ ತೆಳುವಾದ ಚಪ್ಪಲಿ ಬಳಕೆಗೆ ಸೂಚನೆ ನೀಡಲಾಗಿದೆ.

ಚೈನ್, ಕಿವಿಯೋಲೆ, ಉಂಗುರ, ಕೈ ಕಡಗ ಧರಿಸಲು ನಿಷೇಧ ಇದೆ. ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್, ಪೆನ್ ಡ್ರೈವ್, ಇಯರ್ ಫೋನ್ ತರುವಂತಿಲ್ಲ. ಮೈಕ್ರೋ ಫೋನ್, ಬ್ಲೂಟೂತ್, ಗಡಿಯಾರ ಪ್ರವೇಶವಿಲ್ಲ. ಯಾವುದೇ ರೀತಿಯಾದ ಅಹಾರ, ನೀರಿನ ಬಾಟಲಿಗೆ ಅವಕಾಶ ಇಲ್ಲ. ಬದಲಿಗೆ ಪರೀಕ್ಷಾ ಕೇಂದ್ರದಲ್ಲಿಯೇ ನೀರು ಕುಡಿಯಲು ವ್ಯವಸ್ಥೆ ಮಾಡಲಾಗುತ್ತದೆ. ಪೆನ್ಸಿಲ್, ಪೇಪರ್, ಎರೇಸರ್, ಜಾಮಿಟ್ರಿ ಬಾಕ್ಸ್, ಲಾಗ್ ಟೇಬಲ್ ಗಳು ಪರೀಕ್ಷಾ ಕೇಂದ್ರಕ್ಕೆ ನಿಷೇಧ ಹೇರಲಾಗಿದೆ. ಎಲ್ಲಾ ಅಭ್ಯರ್ಥಿಗಳಿಗೆ ಹ್ಯಾಟ್, ಮಾಸ್ಕ್ ಧರಿಸದಂತೆ ಸೂಚನೆ ನೀಡಲಾಗಿದೆ. ಪ್ರವೇಶ ಪತ್ರ, ಸರ್ಕಾರದಿಂದ ಮಾನ್ಯವಾದ ಗುರುತಿನ ಚೀಟಿ ಕಡ್ಡಾಯವಾಗಿದೆ. ಕೊನೆಯ ಬೆಲ್ ಹೊಡೆಯೋವರೆಗೂ ಪರೀಕ್ಷಾ ಹಾಲ್​ನಿಂದ ಅಭ್ಯರ್ಥಿಗಳು ಹೊರ ಹೋಗುವಂತಿಲ್ಲ.

ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕ ಮಾರ್ಗ ಸೂಚಿ..!

ದೊಡ್ಡ ದೊಡ್ಡ ಡಿಸೈನ್, ಬಟನ್ ಇರೋ, ಹೂಗಳು ಇರುವ ಬಟ್ಟೆ ಧರಿಸುವಂತಿಲ್ಲ
ಪೂರ್ಣ ತೋಳಿನ ಬಟ್ಟೆ ಬಳಸದಂತೆ ಸೂಚನೆ ನೀಡಲಾಗಿದೆ
ಮುಜುಗರವಾಗದಂತೆ ಅರ್ಧ ತೋಳಿನ‌ ಬಟ್ಟೆ, ಟಾಪ್​ ಬಳಸಲು ಸೂಚನೆ
ಹೈ-ಹೀಲ್ಸ್, ಶೂ ಹಾಕಿಕೊಂಡು ಪರೀಕ್ಷಾ ಕೊಠಡಿಗೆ ಬರುವಂತಿಲ್ಲ
ಮಹಿಳಾ ಅಭ್ಯರ್ಥಿಗಳಿಗೂ ಯಾವುದೇ ರೀತಿಯ ಲೋಹ, ಚೈನ್ ಬಳಸಂಗಿಲ್ಲ
ಮಂಗಳ ಸೂತ್ರ, ಕಾಲುಂಗುರ ಬಳಸಲು ಅನುಮತಿ ಇದೆ ನೀಡಲಾಗಿದೆ

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments