New delhi

ಲೋಕಸಭೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಮಸೂದೆ ಮಂಡನೆ!

Question paper leak prevention bill introduced in Lok Sabha!

ನವದೆಹಲಿ : ವಿಪಕ್ಷಗಳ ತೀವ್ರ ಗದ್ದಲದ ನಡುವೆಯೇ ಲೋಕಸಭೆಯಲ್ಲಿ ಇಂದು ‘ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ತಿದ್ದುಪಡಿ ಮಸೂದೆ-2026’ ಅನ್ನು ಮಂಡಿಸಲಾಗಿದೆ.

ಲೋಕಸಭೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಮಸೂದೆ ಮಂಡನೆಯಾಗಿದ್ದು, ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಇಂದು ತಿದ್ದುಪಡಿ ಮಸೂದೆಯನ್ನು ಮಂಡಿಸಿದರು. ದೇಶಾದ್ಯಂತ ಸಾರ್ವಜನಿಕ ಪರೀಕ್ಷೆಗಳಲ್ಲಿ ನಡೆಯುತ್ತಿರುವ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅಕ್ರಮಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಈ ಮಸೂದೆ ಅತ್ಯಂತ ಮಹತ್ವದ್ದಾಗಿದೆ.

ಮಸೂದೆ ಮಂಡನೆಯಾಗುತ್ತಿದ್ದಂತೆ ಪ್ರತಿಪಕ್ಷದ ಸಂಸದರು ಎದ್ದು ನಿಂತು ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆಗೆ ಮುಂದಾದರು. ಇತ್ತೀಚೆಗೆ ವಿದ್ಯಾರ್ಥಿಗಳ ಮೇಲೆ ನಡೆದ ಲಾಠಿಚಾರ್ಜ್‌ಗೆ ಸರ್ಕಾರವೇ ಹೊಣೆ ಹೊರಬೇಕೆಂದು ಆಗ್ರಹಿಸಿದ ವಿಪಕ್ಷ ನಾಯಕರು, ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಸದನದಲ್ಲಿ ಗದ್ದಲ ಮುಂದುವರಿದ ಹಿನ್ನೆಲೆಯಲ್ಲಿ, ಪರಿಸ್ಥಿತಿಯನ್ನು ನಿಯಂತ್ರಿಸಲು ಲೋಕಸಭೆ ಮತ್ತು ರಾಜ್ಯಸಭೆ ಎರಡೂ ಸದನಗಳ ಕಲಾಪಗಳನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಲಾಯಿತು.

Comments (0)

Your email address will not be published. Required fields are marked *

Back to top button