Tuesday, January 27, 2026
24.7 C
Bengaluru
Google search engine
LIVE
ಮನೆರಾಜಕೀಯಸದನದಲ್ಲಿ ರಾಜ್ಯಪಾಲರ ಅಡ್ಡಗಟ್ಟಿದ 'ಕೈ' ನಾಯಕರ ವಿರುದ್ಧ ಆರ್. ಅಶೋಕ್ ಕೆಂಡ

ಸದನದಲ್ಲಿ ರಾಜ್ಯಪಾಲರ ಅಡ್ಡಗಟ್ಟಿದ ‘ಕೈ’ ನಾಯಕರ ವಿರುದ್ಧ ಆರ್. ಅಶೋಕ್ ಕೆಂಡ

ಬೆಂಗಳೂರು: ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಕಾಂಗ್ರೆಸ್ ಶಾಸಕರು ಅಡ್ಡಗಟ್ಟಿರುವುದಕ್ಕೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಖಂಡಿಸಿದ್ದಾರೆ. “ಇಂದು ಕರ್ನಾಟಕದ ಸಂಸದೀಯ ಇತಿಹಾಸದಲ್ಲಿ ಒಂದು ಕರಾಳ ದಿನ” ಎಂದು ಕರೆದಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅಶೋಕ್, “ರಾಜ್ಯಪಾಲರು ಸಂವಿಧಾನದ ಚೌಕಟ್ಟಿನಲ್ಲಿ ತಮ್ಮ ಕರ್ತವ್ಯ ನಿರ್ವಹಿಸಿದ್ದಾರೆ. ಭಾಷಣದ ಎಷ್ಟು ಭಾಗ ಓದಬೇಕು ಮತ್ತು ಹೇಗೆ ನಿರ್ಗಮಿಸಬೇಕು ಎಂಬ ಅಧಿಕಾರ ಅವರಿಗೆ ಇದೆ. ಆದರೆ ಅಧಿಕಾರದ ಮದದಲ್ಲಿರುವ ಕಾಂಗ್ರೆಸ್ ನಾಯಕರು ರಾಜ್ಯಪಾಲರನ್ನೇ ಅಡ್ಡಗಟ್ಟಿ ಗೂಂಡಾಗಿರಿ ನಡೆಸಿರುವುದು ನಾಚಿಕೆಗೇಡಿನ ಸಂಗತಿ” ಎಂದು ಕಿಡಿಕಾರಿದರು.

ರಾಜ್ಯಪಾಲರಿಗೆ ಅಗೌರವ ತೋರಿದ ಶಾಸಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅಶೋಕ್ ಒತ್ತಾಯಿಸಿದ್ದಾರೆ. ಇನ್ನು ಸದನದ ಘನತೆಗೆ ಧಕ್ಕೆ ತಂದವರನ್ನು ಶಾಸಕ ಸ್ಥಾನದಿಂದ ಹೊರಹಾಕಬೇಕು ಎಂದು ಆಗ್ರಹಿಸಿ ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಅಧಿಕೃತ ಪತ್ರ ನೀಡುವುದಾಗಿ ತಿಳಿಸಿದರು. ಇದೇ ರಾಜ್ಯಪಾಲರು ಸರ್ಕಾರದ ಬಿಲ್‌ಗಳಿಗೆ ಸಹಿ ಹಾಕಿದಾಗ ಸರಿಯಾಗಿದ್ದರು, ಈಗ ಕೇಂದ್ರದ ವಿರುದ್ಧದ ಸುಳ್ಳುಗಳನ್ನು ಓದದಿದ್ದಾಗ ಕೆಟ್ಟವರಾದರಾ?” ಎಂದು ಪ್ರಶ್ನಿಸಿದರು.

ಇದೇ ವೇಳೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮಾತನಾಡಿ, “ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ದ್ವೇಷ ರಾಜಕಾರಣಕ್ಕೆ ಸದನವನ್ನು ಬಳಸಿಕೊಳ್ಳುತ್ತಿದೆ. ನರೇಗಾ ಯೋಜನೆಯಲ್ಲಿನ ಸುಧಾರಣೆಗಳ ಬಗ್ಗೆ ಸುಳ್ಳು ಅಪಪ್ರಚಾರ ಮಾಡಲಾಗುತ್ತಿದೆ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರನ್ನು ಮೆಚ್ಚಿಸಲು ಈ ರೀತಿ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಲಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments