Wednesday, January 28, 2026
17 C
Bengaluru
Google search engine
LIVE
ಮನೆ#Exclusive NewsTop Newsಅಧಿಕಾರವನ್ನ ಒದ್ದು ಕಿತ್ತುಕೊಳ್ಳುವ ಸಮಯ ಬಂದಿದೆ: ಡಿಕೆ ಶಿವಕುಮಾರ್​ಗೆ ಆರ್ ಅಶೋಕ್ ವ್ಯಂಗ್ಯ

ಅಧಿಕಾರವನ್ನ ಒದ್ದು ಕಿತ್ತುಕೊಳ್ಳುವ ಸಮಯ ಬಂದಿದೆ: ಡಿಕೆ ಶಿವಕುಮಾರ್​ಗೆ ಆರ್ ಅಶೋಕ್ ವ್ಯಂಗ್ಯ

ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಣದ ಏಳು ಮಂದಿ ಸಚಿವರು ಮತ್ತು 35 ಮಂದಿ ಶಾಸಕರು ಗುರುವಾರ ರಾತ್ರಿ ಔತಣಕೂಟ ಮಾಡಿರುವುದನ್ನು ಉಲ್ಲೇಖಿಸಿ ಪ್ರತಿಪಕ್ಷ ನಾಯಕ ಆರ್ ಅಶೋಕ್, ಡಿಸಿಎಂ ಡಿಕೆ ಶಿವಕುಮಾರ್ ಬಗ್ಗೆ ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್​ನಲ್ಲಿ ನಿಮ್ಮ ಸ್ಥಿತಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆ. ಅಧಿಕಾರವನ್ನು ಒದ್ದು ಕಿತ್ತುಕೊಳ್ಳುತ್ತೇನೆ ಎಂಬ ತಮ್ಮ ಮಾತನ್ನು ಕಾರ್ಯಗತ ಮಾಡುವ ಸಮಯ ಬಂದಿದೆ ಎಂದು ಅವರು ಸಾಮಾಜಿಕ ಮಾಧ್ಯಮ ಎಕ್ಸ್ ಸಂದೇಶದಲ್ಲಿ ಡಿಕೆ ಶಿವಕುಮಾರ್ ಟಾಂಗ್ ಕೊಟ್ಟಿದ್ದಾರೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ, ವಿಧಾನಸಭೆಯಲ್ಲಿ ವಿಪಕ್ಷದ ನಾಯಕ ಆರ್. ಅಶೋಕ್ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಅತ್ತ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ವಿದೇಶ ಪ್ರವಾಸಕ್ಕೆ ಹೋಗುವುದನ್ನೇ ಕಾಯುತ್ತಿದ್ದ ಸಿಎಂ ಸಿದ್ದರಾಮಯ್ಯ ಬಣ, ಇತ್ತ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದಲ್ಲಿ 35 ಶಾಸಕರ ಡಿನ್ನರ್ ಮೀಟಿಂಗ್ ನಡೆಸಿ ಶಕ್ತಿ ಪ್ರದರ್ಶನ ಮಾಡಿದೆ.

ಸ್ವಾಮಿ ಡಿ.ಕೆ.ಶಿವಕುಮಾರ್ ಅವರೇ, ಅಧಿಕಾರವನ್ನ ಒದ್ದು ಕಿತ್ತುಕೊಳ್ಳುತ್ತೇನೆ ಎಂದು ಸದನದಲ್ಲಿ ತಾವು ಅಬ್ಬರಿಸದ್ದನ್ನು ಕಾರ್ಯಗತ ಮಾಡುವ ಸಮಯ ಬಂದಿದೆ ಎಂದಿದ್ದಾರೆ.

ತಮ್ಮ ಅನುಪಸ್ಥಿತಿಯಲ್ಲಿ ಸಂಪುಟ ಸಭೆ ನಡೆಯುತ್ತದೆ. ಬಸ್ ಟಿಕೆಟ್ ದರ 15% ಹೆಚ್ಚಿಸುವಂತಹ ಪ್ರಮುಖ ನಿರ್ಧಾರ ಆಗುತ್ತೆ. ಒಬ್ಬ ಉಪಮುಖ್ಯಮಂತ್ರಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷರ ಅನುಪಸ್ಥಿತಿಯಲ್ಲಿ ಇಂತಹ ನಿರ್ಧಾರಗಳು ಆಗುತ್ತೆ ಅಂದರೆ ಏನರ್ಥ? ಕಾಂಗ್ರೆಸ್ ಪಕ್ಷದಲ್ಲಿ ತಾವು ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆಯೇ ಅಥವಾ ತಮ್ಮ ಅಬ್ಬರ ಏನಿದ್ದರೂ ಮಾಧ್ಯಮಗಳ ಮುಂದೆ ಮಾತ್ರವೇ? ಹೀಗೆ ಮುಂದುವರೆದರೆ ತಮ್ಮ ಕನಸು ಕನಸಾಗಿಯೇ ಉಳಿಯುವುದು ಮಾತ್ರ ಗ್ಯಾರೆಂಟಿ ಎಂದು ಟಾಂಗ್ ನೀಡಿದ್ದಾರೆ

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments