ಬೆಂಗಳೂರು: ಜಿಪಿ ರಾಮಚಂದ್ರರಾವ್ ಅವರನ್ನು ಸರ್ಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ರಾಸಲೀಲೆ ವಿಡಿಯೋ ವೈರಲ್ ಆದ ಬೆನ್ನಲ್ಲೇ ಕಠಿಣ ಕ್ರಮಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್ ಅವರನ್ನ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.
ಸಮವಸ್ತ್ರದಲ್ಲಿದ್ದಾಗಲೇ ಕಚೇರಿಯಲ್ಲೇ ಮಹಿಳೆಯೊಬ್ಬರ ಜೊತೆ ಅಸಭ್ಯವಾಗಿ ವರ್ತಿಸುತ್ತಿರುವ ದೃಶ್ಯಗಳು ವಿಡಿಯೋದಲ್ಲಿ ಸೆರೆಯಾಗಿದ್ದು, ಇದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಮೊದಲು ಹತ್ತು ದಿನಗಳ ಕಡ್ಡಾಯ ರಜೆ ಮೇಲೆ ತೆರಳುವಂತೆ ಸೂಚಿಸಲಾಗಿತ್ತಾದರೂ, ಪ್ರಕರಣದ ಗಾಂಭೀರ್ಯತೆಯನ್ನು ಅರಿತ ಸರ್ಕಾರ ರಾತ್ರೋರಾತ್ರಿ ಅಮಾನತು ಆದೇಶ ಹೊರಡಿಸಿದೆ. ಇಲಾಖಾ ವಿಚಾರಣೆ ಬಾಕಿ ಇರುವ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ.
ಈ ಹಿಂದೆ ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ್ದ ಪ್ರಕರಣ ಸಂಬಂಧ ನಟಿ ರನ್ಯಾ ರಾವ್ ಬಂಧನ ಬೆನ್ನಲ್ಲೇ ಮಲತಂದೆ ಡಿಜಿಪಿ ರಾಮಚಂದ್ರ ರಾವ್ ಅವರ ಹೆಸರೂ ಪ್ರಕರಣದಲ್ಲಿ ತಳಕು ಹಾಕಿಕೊಂಡಿತ್ತು. ನಟಿ ರನ್ಯಾ ರಾವ್‌ಗೆ ವಿಮಾನ ನಿಲ್ದಾಣದಲ್ಲಿ ಪ್ರೋಟೋಕಾಲ್ ನೀಡಿದ ಬಗ್ಗೆ ತನಿಖೆಗೆ ಕರ್ನಾಟಕ ಗೃಹ ಇಲಾಖೆ ಆದೇಶಿಸಿತ್ತು. ಚಿನ್ನ ಸ್ಮಗ್ಲಿಂಗ್ ಪ್ರಕರಣದಲ್ಲಿ ರಾಮಚಂದ್ರ ರಾವ್ ಕೂಡ ಶಾಮಿಲಾಗಿದ್ದಾರೆಯೇ? ದುಬೈನಿಂದ ಬೆಂಗಳೂರಿಗೆ ಚಿನ್ನ ಸಾಗಿಸುವಾಗ ಶಿಷ್ಟಾಚಾರ ದುರ್ಬಳಕೆ ಆಗಿರುವುದರಲ್ಲಿ ಅವರ ಕೈವಾಡ ಇದೆಯೇ ಎಂಬ ಬಗ್ಗೆ ತನಿಖೆಗೆ ಸೂಚಿಸಲಾಗಿತ್ತು. ಈ ನಡುವೆ ರಾಸಲೀಲೆಯ ವಿಡಿಯೋ ವೈರಲ್ ಆಗಿದರೋದು ಸಾರ್ವಜನಿಕ ವಲಯದಲ್ಲಿ ಆಕ್ಷೇಪಕ್ಕೆ ಕಾರಣವಾಗಿದೆ.


