ರಾಜಕೀಯಸುದ್ದಿ

ಜಿಹಾದಿ ಮನಸ್ಥಿತಿ ವಿರುದ್ಧ ಹೋರಾಡಿದ ರಘುಪತಿ ಭಟ್‌ ಗೆ ʻMLA, MLCʼ ಟಿಕೆಟ್ಟೂ ಸಿಗಲಿಲ್ಲ : ಪ್ರತಾಪ್‌ ಸಿಂಹ ಪೋಸ್ಟ್

ಮೈಸೂರು :ಬುರ್ಖಾ ಧರಿಸಿ ಕ್ಲಾಸಿಗೆ ಬಂದ ಜಿಹಾದಿ ಮನಸ್ಥಿತಿ ವಿರುದ್ಧ ಹೋರಾಡಿದ ರಘುಪತಿ ಭಟ್‌ ಗೆ ಟಿಕೆಟ್‌ ಮಿಸ್‌ ಆಗಿದ್ದು ಹಿಂದುತ್ವವಾದಿಗಳಿಗೆ ದುರದುಷ್ಟಕರ ಎಂದು ಪ್ರತಾಪ್‌ ಸಿಂಹ ಫೇಸ್‌ ಬುಕ್‌ ಪೇಜ್‌ ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಪ್ರತಾಪ್‌ ಸಿಂಹ ಅವರು, ಉಡುಪಿಯ ಶಿಕ್ಷಣ ಸಂಸ್ಥೆಯೊಂದರಲ್ಲಿ ಸಮವಸ್ತ್ರ ಸಂಹಿತೆಯನ್ನು ಮುರಿದು ಬುರ್ಖಾ ಧರಿಸಿ ಕ್ಲಾಸಿಗೆ ಬಂದ ಜಿಹಾದಿ ಮನಸ್ಥಿತಿಯ ವಿರುದ್ಧ ಹೋರಾಡಿದ ರಘುಪತಿ ಭಟ್ಟರಿಗೆ MLA ಟಿಕೆಟ್ಟೂ ಸಿಗಲಿಲ್ಲ, MLC ಟಿಕೆಟ್ಟನ್ನೂ ಕೊಡಲಿಲ್ಲ. ಸಾಲದೆಂಬಂತೆ ಪಕ್ಷದಿಂದಲೂ ಉಚ್ಛಾಟನೆಗೆ ಒಳಗಾಗಿ ಬುರ್ಖಾ ಸ್ಟೂಡೆಂಟ್ ಆಲಿಯಾ ಅಸ್ಸಾದಿಯಿಂದ ಗೇಲಿಗೆ ಒಳಗಾಗುವ ಪರಿಸ್ಥಿತಿ ಹಿಂದುತ್ವವಾದಿಗಳಿಗೆ ಬಂದಿದ್ದು ದುರದೃಷ್ಟಕರ ಎಂದು ಪೋಸ್ಟ್‌ ಮಾಡಿದ್ದಾರೆ.

ದೇವನು ತಾನಿಚ್ಚಿಸಿದ್ದನ್ನು ಮಾಡಿಯೇ ತೀರುವನು. ವಾರ್ಷಿಕ ಪರೀಕ್ಷೆಗೆ ಇನ್ನೇನು 60 ದಿನಗಳಿರುವಾಗ ಹಿಜಾಬ್ ಧರಿಸಿದ ಏಕಮಾತ್ರ ಕಾರಣಕ್ಕೆ ನನ್ನನ್ನು ಕಾಲೇಜಿನಿಂದ ಹೊರದಬ್ಬಿ ನಿಮ್ಮ ಪಕ್ಷಕ್ಕೆ ದೊಡ್ಡ ಸಾಧನೆ ಮಾಡಿ ತೋರಿಸಿದರಲ್ಲವೇ, ಆದರೆ ಇಂದು ಅದೇ ಪಕ್ಷ ನಿಮ್ಮನ್ನು ಹೊರದಬ್ಬುವ ಆ ಕ್ಷಣವನ್ನು ನಾನು ನನ್ನ ಉಡುಪಿಯಲ್ಲೇ ನೋಡುವಂತಾಯಿತು ಎಂದು ವಿದ್ಯಾರ್ಥಿನಿ ಟ್ವೀಟ್‌ ಮಾಡಿದ್ದರು.‌

 

ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com

Comments (0)

Your email address will not be published. Required fields are marked *

Back to top button