ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಇಂದು ಭಾರತಕ್ಕೆ ಭೇಟಿ ನೀಡಿತ್ತಿದ್ದು, ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಪುಟಿನ್ ಅವರ ಭೇಟಿಗೆ ಕೇಂದ್ರ ಸರ್ಕಾರ ಅವಕಾಶ ನೀಡಿಲ್ಲ..
ಈ ಕುರಿತು ರಾಹುಲ್ ಗಾಂಧಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ಧಾರೆ.. ವಿದೇಶಿ ನಾಯಕರು ಭಾರತ ಪ್ರವಾಸದ ವೇಳೆ ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನು ಭೇಟಿಯಾಗುವುದು ದಶಕಗಳ ಸಂಪ್ರದಾಯವಾಗಿದ್ದು, ಅಟಲ್ ಬಿಹಾರಿ ವಾಜಪೇಯಿ ಮತ್ತು ಮನಮೋಹನ್ ಸಿಂಗ್ ಅವರ ಆಡಳಿತಕಾಲದಲ್ಲಿಯೂ ಇದು ಜಾರಿಯಲ್ಲಿತ್ತು ಎಂದು ಹೇಳಿದರು.
ಆದರೆ ಈಗ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದಲ್ಲಿ ಈ ರಾಜತಾಂತ್ರಿಕ ಶಿಷ್ಟಾಚಾರವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗುತ್ತಿದೆ. ಇದು ದೇಶದ ಸಂಸದೀಯ ವ್ಯವಸ್ಥೆಗೆ ಮಾಡುವ ಅಗೌರವ ಎಂದು ಅವರು ದೂರಿದ್ದಾರೆ. ಪುಟಿನ್ ಅವರ ಭೇಟಿಯ ಸಂದರ್ಭದಲ್ಲಿ ಮಾತ್ರವಲ್ಲದೆ, ಇತ್ತೀಚಿನ ದಿನಗಳಲ್ಲಿ ವಿದೇಶಿ ಗಣ್ಯರ ಭೇಟಿಯ ಸಂದರ್ಭದಲ್ಲಿಯೂ ಇದೇ ರೀತಿಯ ವರ್ತನೆ ಪುನರಾವರ್ತನೆಯಾಗುತ್ತಿದೆ ಎಂದು ರಾಹುಲ್ ಗಾಂಧಿ ಬೇಸರ ವ್ಯಕ್ತಪಡಿಸಿದ್ದಾರೆ.


