Monday, June 23, 2025
26.6 C
Bengaluru
Google search engine
LIVE
ಮನೆ#Exclusive NewsTop Newsಸೋನಿಯಾ ಗಾಂಧಿ ಆಪ್ತ ಸಹಾಯಕ ಪಿ.ಪಿ.ಮಾಧವನ್ ನಿಧನ: ಅಂತಿಮ ದರ್ಶನ ಪಡೆದ ರಾಹುಲ್ ಗಾಂಧಿ

ಸೋನಿಯಾ ಗಾಂಧಿ ಆಪ್ತ ಸಹಾಯಕ ಪಿ.ಪಿ.ಮಾಧವನ್ ನಿಧನ: ಅಂತಿಮ ದರ್ಶನ ಪಡೆದ ರಾಹುಲ್ ಗಾಂಧಿ

ಕೇರಳ: ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ದೀರ್ಘಕಾಲದ ಆಪ್ತ ಸಹಾಯಕರಾಗಿ ಕೆಲಸ ನಿರ್ವಹಿಸುತ್ತಿದ್ದ ಪಿ.ಪಿ. ಮಾಧವನ್ ನಿಧನರಾಗಿದ್ದಾರೆ.

ಮಾಧವನ್ ಡಿಸೆಂಬರ್ 16 ರಂದು ತಮ್ಮ 73ನೇ ವಯಸ್ಸಿನಲ್ಲಿ ಹೃದಯಾಘಾತದಿಂದ ನಿಧನರಾದರು. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ.ವೇಣುಗೋಪಾಲ್ ಸೇರಿದಂತೆ ಪಕ್ಷದ ನಾಯಕರು ಪಿ.ಪಿ. ಮಾಧವನ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದಿದ್ದಾರೆ.

ಮಾಧವನ್ ಅವರು ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಪಕ್ಷಕ್ಕಾಗಿ ನಿಸ್ವಾರ್ಥ ಸೇವೆ ಸಲ್ಲಿಸಿದ್ದಾರೆ. ನಮ್ಮ ಪಕ್ಷದ ವರಿಷ್ಠರೊಂದಿಗೆ (ರಾಜೀವ್ ಗಾಂಧಿ & ಸೋನಿಯಾ ಗಾಂಧಿ) ಉತ್ತಮ ಬಾಂಧವ್ಯ ಹೊಂದಿದ್ದರು. ಮಾಧವನ್ ಅವರ ಹಠಾತ್ ನಿಧನ ಕುಟುಂಬ ಮತ್ತು ಕಾಂಗ್ರೆಸ್‌ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಮಾಧವನ್ ಜಿ ಅವರ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ಕೆ.ಸಿ.ವೇಣುಗೋಪಾಲ್ ಸಂತಾಪ ಸೂಚಿಸಿದ್ದಾರೆ.

ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ದೀರ್ಘಾವಧಿಯ ಸಹಾಯಕರಾಗಿದ್ದ ಪಿ.ಪಿ ಮಾಧವನ್ ಅವರ ನಿಧನ ಸುದ್ದಿ ತಿಳಿದು ಅತೀವ ದುಃಖವಾಗಿದೆ ಎಂದು ತಿರುವನಂತಪುರದ ಕಾಂಗ್ರೆಸ್ ಸಂಸದ ಶಶಿ ತರೂರ್ ಎಕ್ಸ್​​​​ನಲ್ಲಿ ಪೋಸ್ಟ್​​ ಮಾಡಿದ್ದಾರೆ.

ಗಾಂಧಿ ಕುಟುಂಬಕ್ಕೆ ವಿಶ್ವಾಸಾರ್ಹ ವ್ಯಕ್ತಿಯಾಗಿದ್ದ ಮಾಧವನ್ ಅವರು 1984ರಿಂದ ಪಕ್ಷಕ್ಕಾಗಿ ನಿಸ್ವಾರ್ಥ ಸೇವೆ ಸಲ್ಲಿಸಿದ್ದಾರೆ ಎಂದು ತರೂರ್ ಸ್ಮರಿಸಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments