Wednesday, January 28, 2026
24.9 C
Bengaluru
Google search engine
LIVE
ಮನೆ#Exclusive NewsTop Newsಗಾಜಿಪುರ್ ಗಡಿಯಲ್ಲಿ ರಾಹುಲ್ ಗಾಂಧಿ, ಸಂಸದೆ ಪ್ರಿಯಾಂಕಾ ಗಾಂಧಿ ವಾಹನ ತಡೆದ ಪೊಲೀಸರು

ಗಾಜಿಪುರ್ ಗಡಿಯಲ್ಲಿ ರಾಹುಲ್ ಗಾಂಧಿ, ಸಂಸದೆ ಪ್ರಿಯಾಂಕಾ ಗಾಂಧಿ ವಾಹನ ತಡೆದ ಪೊಲೀಸರು

ಘಾಜಿಯಾಬಾದ್: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್​ ಗಾಂಧಿ ಮತ್ತು ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಬೆಂಗಾವಲು ವಾಹನವನ್ನು ಘಾಜಿಪುರ ಗಡಿಯಲ್ಲಿ ತಡೆಹಿಡಿಯಲಾಗಿದೆ. ಇಬ್ಬರೂ ನವದೆಹಲಿಯಿಂದ ಉತ್ತರ ಪ್ರದೇಶದ ಸಂಭಾಲ್​ಗೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಅವರನ್ನು ಘಾಜಿಪುರ ಗಡಿಯ ಬಳಿ ನಿಲ್ಲಿಸಲಾಯಿತು.

ಬೆಂಗಾವಲು ಪಡೆಯನ್ನು ತಡೆಯಲು ಪೊಲೀಸರು ಸುತ್ತಲೂ ಬ್ಯಾರಿಕೇಡ್‌ಗಳನ್ನು ಹಾಕಿದರು. ಬೆಂಗಾವಲು ಪಡೆಯನ್ನು ತಡೆಹಿಡಿದ ವೇಳೆ ಪೊಲೀಸರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ತೀವ್ರ ವಾಗ್ವಾದ ನಡೆಯಿತು. ಸಂಭಾಲ್​ಗೆ ರಾಹುಲ್​ ಗಾಂಧಿ ಅವರ ಉದ್ದೇಶಿತ ಭೇಟಿ ಇರುವುದರಿಂದ ಈಗಾಗಲೇ ಉತ್ತರಪ್ರದೇಶದ ಗೇಟ್​ನಲ್ಲಿ ಹೆಚ್ಚಿನ ಸಂಖ್ಯೆಯ ಪೊಲೀಸ್​ ಪಡೆಗಳನ್ನು ನಿಯೋಜಿಸಲಾಗಿದೆ, ಬ್ಯಾರಿಕೇಡ್‌ಗಳನ್ನು ಹಾಕಲಾಗಿದೆ.

ಸಂಭಾಲ್‌ನಲ್ಲಿ ಭಾನುವಾರದಂದು ಮುಕ್ತಾಯಗೊಳ್ಳಲಿರುವ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (BNSS) ಸೆಕ್ಷನ್ 163 (ಅಪಾಯದ ತುರ್ತು ಪ್ರಕರಣಗಳಲ್ಲಿ ಆದೇಶವನ್ನು ನೀಡುವ ಅಧಿಕಾರ) ಅಡಿಯಲ್ಲಿ ನಿರ್ಬಂಧಗಳನ್ನು ಈಗ ಡಿಸೆಂಬರ್ 31 ರವರೆಗೆ ವಿಸ್ತರಿಸಲಾಗಿದೆ.

ಸಂಭಾಲ್ ಜಿಲ್ಲಾ ಮ್ಯಾಜಿಸ್ಟ್ರೇಟ್ ರಾಜೇಂದ್ರ ಪೆನ್ಸಿಯಾ ಅವರು ಗೌತಮ್ ಬುದ್ಧ ನಗರ ಮತ್ತು ಗಾಜಿಯಾಬಾದ್‌ನ ಪೊಲೀಸ್ ಕಮಿಷನರ್‌ಗಳು ಮತ್ತು ಅಮ್ರೋಹಾ ಮತ್ತು ಬುಲಂದ್‌ಶಹರ್ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪತ್ರ ಬರೆದು ರಾಹುಲ್ ಗಾಂಧಿಯನ್ನು ತಮ್ಮ ಜಿಲ್ಲೆಗಳ ಗಡಿ ಪ್ರವೇಶಿಸಲು ಬಿಡದಂತೆ ಒತ್ತಾಯಿಸಿದ್ದರು.

ರಾಹುಲ್ ಗಾಂಧಿಯವರನ್ನು ಸಂಭಾಲ್ ಗೆ ಹೋಗಲು ಬಿಡುವುದಿಲ್ಲ, ಆಡಳಿತವು ನಿಷೇಧಾಜ್ಞೆಗಳನ್ನು ಹೊರಡಿಸಿದೆ. ಪೊಲೀಸರು ರಾಹುಲ್ ಗಾಂಧಿಯನ್ನು ಗೇಟ್ ಬಳಿ ನಿಲ್ಲಿಸಿದ್ದಾರೆ ಎಂದು ಗಾಜಿಯಾಬಾದ್ ಪೊಲೀಸ್ ಕಮಿಷನರ್ ಅಜಯ್ ಕುಮಾರ್ ಮಿಶ್ರಾ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಸ್ಥಳದಲ್ಲಿ ಸಾಕಷ್ಟು ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ನವೆಂಬರ್ 19 ರಿಂದ ಸಂಭಾಲ್‌ನಲ್ಲಿ ಉದ್ವಿಗ್ನತೆ ಉಂಟಾಗಿತ್ತು, ಮೊಘಲರ ಕಾಲದ ಮಸೀದಿಯನ್ನು ನ್ಯಾಯಾಲಯದ ಆದೇಶದ ಮೇರೆಗೆ ಈ ಹಿಂದೆ ಹರಿಹರ ದೇವಾಲಯವೊಂದು ಆ ಸ್ಥಳದಲ್ಲಿತ್ತು ಎಂಬ ಹೇಳಿಕೆಯ ಮೇರೆಗೆ ಸಮೀಕ್ಷೆ ನಡೆಸಲಾಯಿತು.

ನವೆಂಬರ್ 24 ರಂದು ನಡೆದ ಎರಡನೇ ಸಮೀಕ್ಷೆಯ ವೇಳೆ ಹಿಂಸಾಚಾರ ಭುಗಿಲೆದ್ದಿದ್ದು, ಪ್ರತಿಭಟನಾಕಾರರು ಶಾಹಿ ಜಾಮಾ ಮಸೀದಿ ಬಳಿ ಜಮಾಯಿಸಿ ಭದ್ರತಾ ಸಿಬ್ಬಂದಿಯೊಂದಿಗೆ ಘರ್ಷಣೆ ನಡೆಸಿದರು. ಹಿಂಸಾಚಾರದಲ್ಲಿ ನಾಲ್ವರು ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments